ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವಿದ್ಯಾಸಂಸ್ಥೆಗಳಲ್ಲಿ ವಿವಿಧ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ |

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವತಿಯಿಂದ ನಡೆಸಲ್ಪಡುವ ವಿದ್ಯಾಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಬಹುದು.

 

ಆಸಕ್ತ ಅಭ್ಯರ್ಥಿಗಳು ದಿನಾಂಕ 04-03-2022 ರ ಒಳಗೆ ಅರ್ಜಿಯನ್ನು ಸ್ವವಿವರಗಳೊಂದಿಗೆ ಸ್ವಹಸ್ತಾಕ್ಷರದಲ್ಲಿ ಬರೆದು ಮೊಬೈಲ್ ಸಂಖ್ಯೆಯೊಂದಿಗೆ ಆಯಾಯ ವಿದ್ಯಾಸಂಸ್ಥೆಗಳಿಗೆ ಸಲ್ಲಿಸುವುದು.‌ ಒಂದಕ್ಕಿಂತ ಹೆಚ್ಚು ವಿದ್ಯಾಸಂಸ್ಥಡಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಾವು ಸಲ್ಲಿಸುವ ವಿದ್ಯಾಸಂಸ್ಥೆಗಳ ವಿವರಗಳನ್ನು ಅರ್ಜಿಯಲ್ಲಿ ಬರೆದು ಯಾವುದಾದರೂ ಒಂದು ಸಂಸ್ಥೆಯಲ್ಲಿ ಸಲ್ಲಿಸುವುದು. ಯಾವುದೇ ಅಂಕಪಟ್ಟಿಯನ್ನು ಅರ್ಜಿಯೊಂದಿಗೆ ಲಗತ್ತಿಸುವ ಅಗತ್ಯವಿಲ್ಲ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ‌ 13-03-2022 ನೇ ಆದಿತ್ಯವಾರ ಪೂರ್ವಾಹ್ನ 10.00 ರಿಂದ 01:00 ರವರೆಗೆ ಲಿಖಿತ ಪರೀಕ್ಷೆಯು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕನಗರ, ತೆಂಕಿಲ, ಪುತ್ತೂರು ಇಲ್ಲಿ ನಡೆಯಲಿದೆ. ಎಲ್ಲರೂ ತಪ್ಪದೆ ಹಾಜರಾಗುವುದು‌. ಲಿಖಿತ ಪರೀಕ್ಷೆಗೆ ಪ್ರತ್ಯೇಕ ಪತ್ರ ಕಳುಹಿಸುವುದಿಲ್ಲ.

ಪ್ರಸಕ್ತ ಬಿ ಎಡ್ ಆಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೇಮಕಾತಿಯನ್ನು ಸಂಘದ ನಿಯಮದಂತೆ ಮಾಡಲಾಗುವುದು. ಆಡಳಿತ ಮಂಡಳಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

Leave A Reply

Your email address will not be published.