9 ನೇ ತರಗತಿಯ ಶಾಲಾ ಬಾಲಕಿಯನ್ನು ಅಡ್ಡಗಟ್ಟಿ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು !!!

ಶಾಲೆಯಿಂದ ವಾಪಾಸಾಗುತ್ತಿದ್ದ ಹುಡುಗಿಯನ್ನು ಶುಕ್ರವಾರ ಸಂಜೆ ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಮಸ್ಕಿ ಪಟ್ಟಣದ ಸಾನಬಾಳ‌ ರಸ್ತೆಯಲ್ಲಿ ಚಾಕುವಿನಿಂದ ಹೊಟ್ಟೆ ಭಾಗಕ್ಕೆ ಇರಿದು 15 ವರ್ಷದ ಭೂಮಿಕಾ ಎಂಬ 9 ನೇ ತರಗತಿಯ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ ವೇಳೆ ಅಡ್ಡಗಟ್ಟಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಭೂಮಿಕಾಳನ್ನು ಹತ್ಯೆಗೈಯಲಾಗಿದೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಕೊಲೆಗೆ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave A Reply

Your email address will not be published.