ಗ್ರಾಹಕರೇ ಗಮನಿಸಿ : ರಷ್ಯಾ ಉಕ್ರೇನ್ ಯುದ್ಧ ಎಫೆಕ್ಟ್| ಅಡುಗೆ ಎಣ್ಣೆ ಬೆಲೆ ಏರಿಕೆ
ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬೆಲೆ ಏರಿಕೆಯ ಮತ್ತೊಂದು ಬಿಸಿ ತಟ್ಟಲಿದೆ. ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಉಕ್ರೇನ್ ಮತ್ತು ರಷ್ಯಾ ದೇಶಗಳು ಸೂರ್ಯಕಾಂತಿ ಎಣ್ಣೆ ಉತ್ಪಾದನೆ ಮತ್ತು ರಫ್ತಿನಲ್ಲಿ ಮುಂಚೂಣಿಯಲ್ಲಿದ್ದು, ಯುದ್ಧದಿಂದಾಗಿ ಅಡುಗೆ ಎಣ್ಣೆ ಪೂರೈಕೆಯಲ್ಲಿ ವ್ಯತ್ಯಯವಾಗಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಷ್ಯಾ ಮತ್ತು ಉಕ್ರೇನ್ ದೇಶಗಳಿಂದ ಭಾರತ ಶೇ.90 ರಷ್ಟು ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತದೆ. ಅಂಕಿ ಅಂಶದ ಪ್ರಕಾರ ಭಾರತದಲ್ಲಿ ವಾರ್ಷಿಕ 25 ಲಕ್ಷ ಟನ್ ಅಡುಗೆ ಎಣ್ಣೆ ಬಳಕೆಯಾಗುತ್ತಿದೆ.
ಭಾರತ ಉಕ್ರೇನ್ ದೇಶದಿಂದ 2019-20 ರಲ್ಲಿ 19.3 ಲಕ್ಷ ಟನ್ 2020-21 ರಲ್ಲಿ 17 ಲಕ್ಷ ಟನ್, ಹಾಗೂ ರಷ್ಯಾದಿಂದ 2019-20 ರಲ್ಲಿ 38 ಸಾವಿರ ಟನ್ ಹಾಗೂ 2020-21 ರಲ್ಲಿ ಸಾವಿರ ಟನ್ ಆಮದು ಮಾಡಿಕೊಂಡಿತ್ತು. ಇದೀಗ ಉಕ್ರೇನ್ ಹಾಗೂ ರಷ್ಯಾ ದೇಶಗಳ ನಡುವಿನ ಯುದ್ಧದಿಂದಾಗಿ ಅಡುಗೆ ಎಣ್ಣೆ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.