ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಸ್ಲಿಂ ಮಹಿಳೆಯ ಬುರ್ಖಾದೊಳಗಿತ್ತು ಲಕ್ಷ ಬೆಲೆಬಾಳುವ ಚಿನ್ನ!! ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಆರೋಪಿ ಮಹಿಳೆ ವಶಕ್ಕೆ

Share the Article

ಹೈದರಾಬಾದ್: ಮುಸ್ಲಿಂ ಮಹಿಳೆಯೊಬ್ಬಳು ತನ್ನ ಬುರ್ಕಾದೊಳಗೆ ಚಿನ್ನದ ಮಣಿಯನ್ನು ಜೋಡಿಸಿ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಸುಮಾರು 18 ಲಕ್ಷ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ದುಬೈನಿಂದ ಸಾಗಿಸಿದ ಆರೋಪದಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ.

ವಶಕ್ಕೆ ಪಡೆದುಕೊಳ್ಳುವ ಸಂದರ್ಭದಲ್ಲಿ ಆಕೆಯ ಬುರ್ಕಾದಲ್ಲಿ ಸುಮಾರು 350 ಗ್ರಾಂ ಚಿನ್ನವಿದ್ದು,ಆಕೆಯನ್ನು ವಶಕ್ಕೆ ಪಡೆದುಕೊಂಡ ಅಧಿಕಾರಿಗಳು ಪ್ರಕರಣಕ್ಕೆ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Leave A Reply