SSLC, PUC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ

ಕಳೆದೆರಡು ವರ್ಷಗಳಿಂದ ಶಾಲಾ ಕಾಲೇಜುಗಳು ಸರಿಯಾಗಿ ನಡೆದೇ ಇಲ್ಲ. ಸರಿಯಾದ ಸಮಯಕ್ಕೆ ಪಾಠ ನಡೆದಿಲ್ಲ. ಕೊರೊನಾದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಕಟ ಬಂದಿರುವುದಂತೂ ನಿಜ.

ಈ ಕಾರಣದಿಂದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ, ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಸಲಿಸಲು ಸರಕಾರ ನಿರ್ಧರಿಸಿದೆ.

ಭೌತಿಕ ತರಗತಿಗಳ ಆರಂಭದ ವಿಳಂಬ ಒಂದು ಕಡೆಯಾದರೆ, ಆನ್ಲೈನ್ ತರಗತಿಗಳ ಸಮಯದಲ್ಲಿ ನೆಟ್ ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗೆ ಹಾಜರಾಗಲು 75% ಹಾಜರಾತಿಯನ್ನು ಕಡ್ಡಾಯಗೊಳಿಸದಿರಲು ಇಲಾಖೆ ನಿರ್ಧಾರ ಮಾಡಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಈ ಬಗ್ಗೆ ಮಾತನಾಡುತ್ತಾ,’ ಈ ವರ್ಷದಲ್ಲಿ 75% ಹಾಜರಾತಿ ಕಡ್ಡಾಯವಿಲ್ಲ. ಈ ವಿಚಾರವಾಗಿ ಕಾಲೇಜು ಮಟ್ಟದಲ್ಲಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಹಾಜರಾತಿ ಕೊರತೆಯಿಂದ ಪ್ರತಿ ವರ್ಷ ಕನಿಷ್ಠ 2000 ರಿಂದ 4000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದಿಲ್ಲ. ಕರ್ನಾಟಕ ಶಿಕ್ಷಣ ಕಾಯಿದೆ, 2006 ರ ನಿಯಮ 21, ವಿದ್ಯಾರ್ಥಿಗಳು 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು 75% ಹಾಜರಾತಿಯನ್ನು ಕಡ್ಡಾಯಗೊಳಿಸುತ್ತದೆ ಎಂದಿದ್ದಾರೆ.

Leave A Reply

Your email address will not be published.