ಮತಾಂತರ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಬೀದಿಗಿಳಿದ ಕ್ರೈಸ್ತ ಸಮುದಾಯ!!
ಮಂಗಳೂರು : ಮತಾಂತರ ತಡೆ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತ ಸಮುದಾಯ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್ ಗಳ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಾಗೂ ಮಾನವ ಸರಪಳಿ ನಡೆಯಿತು.
ಬಂಟ್ವಾಳ ಹಾಗೂ ಮೊಗರ್ನಾಡು ವಲಯದ ವತಿಯಿಂದ ಬಂಟ್ವಾಳ್ ಬಿ ಸಿ ರೋಡ್ ನ ಬೈಪಾಸ್ ಸರ್ಕಲ್ ಬಳಿ ನಡೆದ ಈ ಪ್ರತಿಭಟನೆಯಲ್ಲಿ ಮಂಗಳೂರು ಕ್ಯಾಥೋಲಿಕ್ ಸಭಾದ ಕೇಂದ್ರೀಯ ಅಧ್ಯಕ್ಷ ಸ್ಟ್ಯಾನ್ಲಿ ಲೋಬೋ ಕೋರ್ಟ್ ನಿಂದ ಸ್ಟೇ ಆರ್ಡರ್ ಇದ್ದರೂ ಹಗಲಿನಲ್ಲಿ ಕೆಡವಿದ್ದಾರೆ. ಈ ಬಗ್ಗೆ ದೂರು ನೀಡಿದಾಗ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಹೇಳಿದರು.
ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರರೂ ಬೇರೆಯದ್ದೇ ಹೇಳಿಕೆ ನೀಡಿದ್ದಾರೆಂದು ಆರೋಪಿಸಿದರು. ಅದನ್ನು ಅಂಗನವಾಡಿ ಕಟ್ಟಡ ಎಂದು ಹೇಳುತ್ತಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಈ ಬಗ್ಗೆ ತೀವ್ರವಾಗಿ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನೆಯಲ್ಲಿ ಹೇಳಿದರು.