ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ಥಿ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಕುರಿತು ಆದೇಶದಲ್ಲಿ ತಿಳಿಸಲಾಗಿದೆ. ಲಘು ವಾಹನಗಳು ಮತ್ತು ಭಾರೀ ವಾಹನಗಳಿಗೆ ಪ್ರತ್ಯೇಕ ಮಾರ್ಗ ಸೂಚಿಸಲಾಗಿದೆ.
ಯಾವುದು ಪರ್ಯಾಯ ಮಾರ್ಗ ?
ಪ್ರಸ್ತುತ ಮಾರ್ಗ : ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಉಡುಪಿ, ಮಂಗಳೂರು.
ಪರ್ಯಾಯ ಮಾರ್ಗ : ಲಘು ವಾಹನಗಳಿಗೆ – ಶಿವಮೊಗ್ಗ, ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾ ಘಾಟ್, ಕಾರ್ಕಳ, ಉಡುಪಿ
ಭಾರೀ ವಾಹನಗಳು : ಶಿವಮೊಗ್ಗ, ಆಯನೂರು, ಆನಂದಪುರ, ಸಾಗರ, ಹೊನ್ನಾವರ ಮೂಲಕ ಚಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.