ಉದ್ಯೋಗವಕಾಶ; ಕರ್ನಾಟಕ ಬ್ಯಾಂಕ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಬ್ಯಾಂಕ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು  ಅರ್ಜಿ ಆಹ್ವಾನಿಸಿದೆ. 

ಮಂಗಳೂರಿನಲ್ಲಿ ಚೀಫ್​ ಫೈನಾನ್ಸಿಯಲ್ ಆಫೀಸರ್(Chief Financial Officer) ಹುದ್ದೆ ಖಾಲಿ ಇದ್ದು, ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ CA (ಚಾರ್ಟರ್ಡ್ ಅಕೌಂಟೆಂಟ್) ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಫೈನಾನ್ಸಿಯಲ್ ಆಪರೇಷನ್ಸ್​ನಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ karnatakabank.com ಗೆ ಭೇಟಿ ನೀಡಿ

Leave A Reply

Your email address will not be published.