ಬೊಮ್ಮಾಯಿ ಬಿಗ್ ಬಜೆಟ್ ಕಂಪ್ಲೀಟ್ ಡೀಟೇಲ್ಸ್
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ 2022-23 ನೇ ಸಾಲಿನ ಬಜೆಟ್ ನ್ನು ಮಂಡಿಸಿದ್ದಾರೆ. ಉದ್ಯೋಗ ಸೃಜನೆಗೆ ಒತ್ತು ನೀಡುವ ಸಮಗ್ರ ಉದ್ಯೋಗ ನೀತಿ ಜಾರಿಗೆ ಕ್ರಮಕೈಗೊಳ್ಳಲಾಗುತ್ತದೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳದ ಗುರಿ ಹೊಂದಿದೆ ಎಂದು ಹೇಳಿದ್ದಾರೆ. ಈ ಬಾರಿ ಯಾವುದೇ ತೆರಿಗೆ ಹೆಚ್ಚಳ ಮಾಡಲಾಗಿಲ್ಲ. ಅಂಗನವಾಡಿ,ಬಿಸಿಯೂಟ ಕಾರ್ಯಕರ್ತೆಯರ ಸಹಾಯ ಧನ ರೂ.1000 ಹೆಚ್ಚಳ ಮಾಡಲಾಗಿದೆ .
ಬಜೆಟ್ ಮಂಡನೆಯ ಮುಖ್ಯಾಂಶಗಳು ಇಲ್ಲಿವೆ.
ಆಶಾ ಕಾರ್ಯಕರ್ತೆಯರಿಗೆ ಗೌರವಧನ 1 ಸಾವಿರ ರೂ. ಏರಿಕೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. 20 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ 1500 ರೂ. 15 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ 1200 ರೂ ಹಾಗೂ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 1000 ರೂ. ಗೌರವಧನ ಹೆಚ್ಚಳ ಮಾಡಲಾಗಿದೆ.
ಮೀನುಗಾರರಿಗೆ ರಾಜ್ಯ ಸರಕಾರವು ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ 5 ಸಾವಿರ ವಸತಿ ರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆ ಮೇರೆಗೆ ಮನೆಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ ಎಂದು ಬಜೆಟ್ ನ್ನು ನಾಲ್ಕು ವಿಭಾಗಗಳಾಗಿ ಮಾಡಲಾಗಿದ್ದು, ಮಹಿಳೆಯರಿಗಾಗಿ ಮಹಿಳಾ ಬಜೆಟ್, ಚಿಣ್ಣರಿಗಾಗಿ ವಿಶೇಷ ಪುಣಾಣಿ ಬಜೆಟ್, ಬಜೆಟ್ ಗಾತ್ರ 2 ಲಕ್ಷ 60 ಸಾವಿರ ಕೋಟಿ ರೂ.ಇದೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು,ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರತಿಪಕ್ಷ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆದಿದ್ದ ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಅನುದಾನ ಘೋಷಣೆ ಮಾಡಿದ್ದಾರೆ.
ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ಆಯವ್ಯಯದಲ್ಲಿ ಒದಗಿಸಿದ ಅನುದಾನ 43178 ಕೋಟಿ ರೂಪಾಯಿ
ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂಪಾಯಿ.
ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ :
ಆಯ್ದ ಸ್ವಸಹಾಯ ಸಂಘಟನೆಗಳಿಗೆ ತಲಾ1.5 ಲಕ್ಷ ರೂ.ನೆರವು, 500 ಕೋಟಿ ರೂ.ಅನುದಾನ.ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ. 3.9 ಲಕ್ಷ ಮಹಿಳೆಯರಿಗೆ ಅನುಕೂಲ.
ಮಹಿಳಾ ಸ್ವಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ.
ಸ್ವಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು ” ಅಸ್ಮಿತೆ” ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ. ಹೋಬಳಿ/ ಜಿಲ್ಲೆ/ ರಾಜ್ಯಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ.
2022-23 ರಲ್ಲಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ
ದುರ್ಬಲ ವರ್ಗಗಳ ಸಬಲೀಕರಣ : ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ 800 ಕೋಟಿ ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ.ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿಯ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ.
ಪ್ರತಿ ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತರ ಒಂದು ಶಾಲೆಯನ್ನು ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಾಗಿ ಮರುನಾಮಕರಣ. ಪದವಿ ಪೂರ್ವ ತರಗತಿ ಪ್ರಾರಂಭ, ಸಿಬಿಎಸ್ ಇ ಮಾನ್ಯತೆ ಪಡೆಯಲು ಕ್ರಮ. 25 ಕೋಟಿ ಅನುದಾನ.
ಉಡುಪಿ, ದಕ್ಷಿಣ ಕನ್ನಡ , ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ.
2022-23 ನೇ ಸಾಲಿನಲ್ಲಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ. 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ.
ಕೆಪಿಎಸ್ ಸಿ, ಯುಪಿಎಸ್ ಸಿ, ಎಸ್ ಎಸ್ ಸಿ, ಬ್ಯಾಂಕಿಂಗ್, ರೈಲ್ವೆ, ಸಿಡಿಎಸ್, ನೀಟ್, ಜೆಇಇ ಮುಂತಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರಕಾರದ ವತಿಯಿಂದ ಆನ್ಲೈನ್ ಕೋಚಿಂಗ್.
ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30,000 ಯಾತ್ರಾರ್ಥಿಗಳಿಗೆ ಸರಕಾರದಿಂದ ತಲಾ.5000/- ರೂ. ಸಹಾಯಧನ ಘೋಷಣೆ.
ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ ಪ್ರಾರಂಭಿಸುವ ಘೋಷಣೆ.
ನವ ಭಾರತಕ್ಕಾಗಿ ನವ ಕರ್ನಾಟಕದ ನಿರ್ಮಾಣ ಮಾಡಲಾಗುವುದು. ರಾಜ್ಯದ ಜಿಎಸ್ ಟಿ ಸಂಗ್ರಹ ಹೆಚ್ಚಾಗಿದ್ದು ಚೇತರಿಕೆ ಹಾದಿ ಹಿಡಿದಿದೆ.
ವಿವಿಧ ವಲಯಗಳಿಗೆ ಒದಗಿಸಲಾದ ಅನುದಾನ :
- ಕೃಷಿ ಮತ್ತು ಪೂರಕ ಚಟುವಟಿಕೆಗಳು : 33,700 ಕೋಟಿ ರೂಪಾಯಿ
- ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ : 68,479 ಕೋಟಿ
- ಆರ್ಥಿಕ ಅಭಿವೃದ್ಧಿಗೆ ಉತ್ತೇಜನ : 55,657 ಕೋಟಿ
- ಬೆಂಗಳೂರು ಸಮಗ್ರ ಅಭಿವೃದ್ಧಿ : 8409 ಕೋಟಿ
- ಸಂಸ್ಕೃತಿ ಸುಧಾರಣೆ ಮತ್ತು ಸಾರ್ವಜನಿಕ ಸೇವೆ : 56710 ಕೋಟಿ
ರೈತರ ಆದಾಯ ಹೆಚ್ಚಳಕ್ಕೆ ಆದ್ಯತೆ : ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ.ಗಳಂತೆ ಡೀಸೆಲ್ ಸಹಾಯಧನ. 600 ಕೋಟಿ ಅನುದಾನ.
ಸಿಎಂ ಆರೋಗ್ಯ ವಾಹಿನಿ : ಆರೋಗ್ಯ ಸೇವೆಗೆ ಏರ್ ಆಂಬ್ಯುಲೆನ್ಸ್. ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು.
ಬೆಂಗಳೂರು ಸಮಗ್ರ ಅಭಿವೃದ್ಧಿ : ಮೂಲ ಸೌಕರ್ಯ ಅಭಿವೃದ್ಧಿ : ಬೆಂಗಳೂರು ನಗರದ ಮೂಲಭೂತ ಸೌಕರ್ಯಕ್ಕಾಗಿ ಮೂರು ವರ್ಷದಲ್ಲು 6000 ಕೋಟಿ ವಚ್ಚದ ಅಮೃತ್
ನಗರೋತ್ಥಾನ ಯೋಜನೆ ಅನುಷ್ಠಾನ : ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆ ಬಾಕಿ ಇರುವ 1297 ಎಕರೆ ಭೂ ಸ್ವಾಧೀನ ಪೂರ್ಣಗೊಳಿಸಿ, ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಕ್ರಮ
ಹಾಲು ಉತ್ಪಾದಕರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್
ಪಶು ಸಂಗೋಪನೆ, ಹೈನುಗಾರಿಕೆಗೆ ಉತ್ತೇಜನ : ನೂತನ 100 ಪಶುಚಿಕಿತ್ಸಾಲಯ ಪ್ರಾರಂಭ.
ಹಾಲು ಉತ್ಪಾದಕರಿಗರ ಸಾಲಸೌಲಭ್ಯ ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ, ರಾಜ್ಯ ಸರಕಾರದಿಂದ 100 ಕೋಟಿ ರೂ.ಷೇರು ಬಂಡವಾಳ.
ರಾಜ್ಯದಲ್ಲಿ ಗೋ ಶಾಲೆಗಳ ದತ್ತು ಪ್ರೋತ್ಸಾಹಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆ ಚಾಲನೆ.
ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆ 100 ಕ್ಕೆ ಹೆಚ್ಚಳ, 50 ಕೋಟಿ ಅನುದಾನ.
ನೀರಾವರಿಗೆ ಆದ್ಯತೆ : ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗರ ಮಾಡಲಾದ ಅನುದಾನ ಹಂಚಿಕೆ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ : 3- 5000 ಕೋಟಿ ರೂ.
ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆ : 1000 ಕೋಟಿ ರೂ.
ಭದ್ರ ಮೇಲ್ದಂಡೆ ಯೋಜನೆ : 3000 ಕೋಟಿ ರೂ.
ಎತ್ತಿನಹೊಳೆ ಯೋಜನೆ : 3000 ಕೋಟಿ ರೂ.
ಮೇಕೆದಾಟು ಯೋಜನೆ : 1000 ಕೋಟಿ ರೂ. ಅನುದಾನ
ಗುಣಮಟ್ಟದ ಶಿಕ್ಷಣ : ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮಾಧ್ಯಮಿಕ ಮತ್ತು ಪ್ರೌಢಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.
ಹೋಬಳಿ ಮಟ್ಟಡ ಮಾದರಿ ಶಾಲೆಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆ ಉನ್ನಥೀಕರಣ
ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ.ಅನುದಾನ. ಆಯ್ದ ಅಭಿಯ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ.
ಸರಕಾರಿ ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.
ನೋಡಿ ಕಲಿ ಮಾಡಿ ತಿಳಿ ಪರಿಕಲ್ಪನೆಯಡಿ ರಾಜ್ಯದ 169 ಸರಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್ ಇನ್ ಎ ಕಿಟ್ ವಿತರಣೆ.
ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ.
ಭಕ್ತಾಧಿಗಳ ಬಹುಕಾಲದ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮ.
2021-22 ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಸಾಲಿನಲ್ಲಿ 168 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ. ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂ.ವೆಚ್ಚ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ತಸ್ತಿಕ್ ಮೊತ್ತ 60,000 ರೂ.ಗಳಿಗೆ ಹೆಚ್ಚಳ
ಭಕ್ತಾಧಿಗಳಿಗೆ ಆನ್ಯ ಮುಖಾಂತರ ವಿವಿಧ ಸೇವೆ ಒದಗಿಸಲು Integrated temple management sy ತಂತ್ರಾಂಶ ಜಾರಿ.
ಸರ್ವರಿಗೂ ಸೂರು : ರಾಜ್ಯದಲ್ಲಿ 5 ಲಕ್ಷ ಹೊಸ ಮನೆಗಳ ನಿರ್ಮಾಣದ ಗುರಿ ನಿಗದಿ, 6612 ಕೋಟಿ ರೂ. ಮಂಜೂರು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರು, ಮೀನುಗಾರರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಆದ್ಯತೆ.