ಉಕ್ರೇನ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು !! | ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು
ರಷ್ಯಾದ ಗುಂಡೇಟಿಗೆ ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿಯಾಗಿರುವ ಬೆನ್ನಲ್ಲೇ, ಕೀವ್‍ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದೆ ಎಂದು ಕೇಂದ್ರ ಸಚಿವ ವಿ.ಕೆ ಸಿಂಗ್ ಮಾಹಿತಿ ನೀಡಿದ್ದಾರೆ.
ಕೀವ್‍ನಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡು ತಗುಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರನ್ನೂ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡುವ ಕೆಲಸ ನಡೆಯುತ್ತಿದೆ. ಗಾಯಾಗೊಂಡಿರುವ ವಿದ್ಯಾರ್ಥಿ ಯಾರು? ಎನ್ನುವ ಮಾಹಿತಿ ಇಲ್ಲ, ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಪ್ರತಿಯೊಬ್ಬರೂ ಕೀವ್ ತೊರೆಯಬೇಕು ಎಂಬ ಆದ್ಯತೆಯ ಮೇಲೆ ಭಾರತೀಯ ರಾಯಭಾರ ಕಚೇರಿ ಈ ಹಿಂದೆಯೇ ತೆರವುಗೊಳಿಸಿತ್ತು. ಕೆಲವು ದಿನಗಳ ಹಿಂದೆ ರಷ್ಯಾ, ಉಕ್ರೇನ್ ಮೇಲೆ ನಡೆಸಿದ ಶೆಲ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದಾರೆ. ಇದೀಗ ಒಬ್ಬ ವಿದ್ಯಾರ್ಥಿಗೆ ಗುಂಡು ತಗುಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ನಾಗರಿಕ ವಿಮಾನಯಾನ ಸಚಿವಾಲಯದ (ಮೊಸಿಎ) ರಾಜ್ಯ ಸಚಿವ (ಎಂಒಎಸ್) ಜನರಲ್ ವಿ.ಕೆ ಸಿಂಗ್ ಪೋಲೆಂಡ್‍ನ ರ್ಜೆಸ್ಜೋವ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿದರು. ಯುದ್ಧದ ಸಂದರ್ಭದಲ್ಲಿ, ಗನ್‍ನಲ್ಲಿರುವ ಬುಲೆಟ್ ಎದುರಿರುವ ಯಾರು, ಧರ್ಮ, ರಾಷ್ಟ್ರೀಯತೆಯನ್ನು ನೋಡುವುದಿಲ್ಲ ಎಂದಿದ್ದಾರೆ.
ವಿದ್ಯಾರ್ಥಿಗಳು ಪ್ರಸ್ತುತ ಯುದ್ಧ ಪೀಡಿತ ದೇಶ ಉಕ್ರೇನ್‍ನಿಂದ ಪಲಾಯನ ಮಾಡುತ್ತಿದ್ದಾರೆ. ಭಾರತಕ್ಕೆ ಸುರಕ್ಷಿತವಾಗಿ ಮರಳಲು ಪೋಲೆಂಡ್‍ನ ಗಡಿಯನ್ನು ತಲುಪಲು ಪ್ರಯತ್ನಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಎಂ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ (ನಿವೃತ್ತ) ವಿಕೆ ಸಿಂಗ್ ಉಕ್ರೇನ್‍ಗೆ ಹೊಂದಿಕೊಂಡಿರುವ ದೇಶಗಳಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.