ಮುಂದಿನ ಮೂರು ದಿನ ಕರಾವಳಿ ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ, ಮಾರ್ಚ್ 7 ರ ನಾಳೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಾರ್ಚ್ 8 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 7 ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಇದಕ್ಕೆ ಕಾರಣ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವಂತ ತೀವ್ರ ವಾಯುಭಾರ ಕುಸಿತ. ಕಳೆದೆರಡು ತಿಂಗಳಿನಿಂದ ಇದ್ದ ಒಣ ಹವೆ ರಾಜ್ಯದಲ್ಲಿ ಕೊನೆಗೊಳ್ಳುತ್ತಿದೆ.

ಮಾರ್ಚ್ 8 ಮತ್ತು ಮಾರ್ಚ್ 9 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ. ಇನ್ನು ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಮಾರ್ಚ್ 9 ರವರೆಗೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಾರ್ಚ್ 7 ರಂದು ಕೋಲಾರ, ಚಿಕ್ಕಬಳ್ಳಾಪುರ, ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಾದಂತ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Leave A Reply

Your email address will not be published.