ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಬಂಧನಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ ‘ ಬಿಜೆಪಿ ಯಾವ ಮುಸ್ಲಿಂನನ್ನು ಕೂಡಾ ಬೇಕಿದ್ದರೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬಂತೆ ಬಿಂಬಿಸುತ್ತದೆ’ ಎಂದು ಆರೋಪ ಮಾಡಿದ್ದಾರೆ.
ನಬಾಬ್ ಮಲಿಕ್ ಬಂಧನ ರಾಜಕೀಯ ಪ್ರೇರಿತವಾದದ್ದು ಎಂದು ಕಿಡಿಕಾರಿದ್ದಾರೆ. ಯಾವುದೇ ಮುಸ್ಲಿಂ ವ್ಯಕ್ತಿಯನ್ನು ದಾವೂದ್ ಇಬ್ರಾಹಿಂ ಜೊತೆ ಸಂಪರ್ಕದಲ್ಲಿದ್ದರು, ವ್ಯವಹಾರ ನಡೆಸಿದ್ದರು ಎಂಬಂತೆ ಬಿಂಬಿಸಿ ಬಿಡುತ್ತಾರೆ. ಈಗ ನವಾಬ್ ಮಲಿಕ್ ಅವರಿಗೂ ಕೂಡಾ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಇತ್ತು ಎಂಬಂತೆ ಬಿಂಬಿಸಲು ಪ್ರಯತ್ನ ಪಡುತ್ತಿದ್ದಾರೆ. ಈ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ. ಬಿಜೆಪಿಯವರು ರಾಜೀನಾಮೆ ಕೇಳುತ್ತಿದ್ದಾರೆ. ಹಾಗಾಗಿ ಬಿಜೆಪಿಯವರಿಗೆ ನನ್ನದೊಂದು ಪ್ರಶ್ನೆ ಇದೆ, ಇತ್ತೀಚೆಗೆ ಕೇಂದ್ರ ಸಚಿವ ನಾರಾಯಣ್ ರಾಣೆಯನ್ನು ಬಂಧಿಸಲಾಗಿತ್ತು. ಅವರು ಜಾಮೀನು ಪಡೆದು ಹೊರಗಡೆ ಬಂದಿದ್ದಾರೆ. ಅವರಲ್ಲಿ ಯಾಕೆ ರಾಜೀನಾಮೆ ಕೇಳಿಲ್ಲ. ಇದಕ್ಕೆ ಪ್ರಧಾನಿ ಮೋದಿ ಉತ್ತರ ನೀಡಬೇಕು ಎಂದು ವಿವರಣೆ ಕೇಳಿದ್ದಾರೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರರೊಂದಿಗೆ ನವಾಬ್ ಮಲಿಕ್ ಆಸ್ತಿ ವ್ಯವಹಾರ ನಡೆಸಿದ್ದರು ಎಂಬ ಆರೋಪ ಬಂದ ಕೂಡಲೇ ಇ ಡಿ ತನಿಖೆ ಶುರುಮಾಡಿತ್ತು. ಅನಂತರ ನವಾಬ್ ಅವರನ್ನು ಬಂಧಿಸಲಾಗಿತ್ತು. ಸದ್ಯ ಮಾರ್ಚ್ 7 ರವರೆಗೆ ಇ ಡಿ ಕಸ್ಟಡಿ ವಿಧಿಸಲಾಗಿದೆ.
You must log in to post a comment.