ಮಹಿಳಾ ಪೊಲೀಸರು, ವಕೀಲರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾತ ಪೊಲೀಸ್ ಬಲೆಗೆ

ಬೆಂಗಳೂರು : ಮಹಿಳಾ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 100 ಕ್ಕೂ ಹೆಚ್ಚು ಜನರಿಗೆ ಅಶ್ಲೀಲ ಸಂದೇಶಗಳು ಮತ್ತು ವೀಡಿಯೊಗಳನ್ನು ಕಳುಹಿಸುವ ಮೂಲಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ 37 ವರ್ಷದ ವ್ಯಕ್ತಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ದಿವ್ಯರಾಜ್ ಬಂಧಿತ ಆರೋಪಿ. ಈತ ಕೃಷ್ಣ, ರಾಮಕೃಷ್ಣ, ಮಂಜುನಾಥ್, ಚೂಲ್, ಪ್ರಶಾಂತ್, ಪ್ರವೀಣ್ ಸೇರಿದಂತೆ ಬೇರೆ ಬೇರೆ ಹೆಸರುಗಳಲ್ಲಿ ಪರಿಚಯ ಮಾಡಿಕೊಳ್ಳುತ್ತಿದ್ದ.


Ad Widget

Ad Widget

Ad Widget

Ad Widget

Ad Widget

Ad Widget

ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 14 ಪ್ರಕರಣಗಳು ದಾಖಲಾಗಿವೆ. ತನ್ನನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲು ಹಾಕಿದ್ದ ಆತ ಕಳೆದ ಆರು ತಿಂಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಆರೋಪಿ ವಾಟ್ಸಾಪ್‌ನಲ್ಲಿ ಅಶ್ಲೀಲ ಸಂದೇಶಗಳು ಮತ್ತು ವೀಡಿಯೊಗಳನ್ನು ಕಳುಹಿಸುತ್ತಿದ್ದ. ಅಲ್ಲದೆ ಮಹಿಳಾ ಪೊಲೀಸರು ಹಾಗೂ ವಕೀಲರ ಸಂಪರ್ಕ ಬೆಳೆಸಿ ಅವರ ಮೊಬೈಲ್ ನಂಬರ್ ಪಡೆದು ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ.

error: Content is protected !!
Scroll to Top
%d bloggers like this: