ಶರವೂರು : ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

ಕಡಬ: ಡಾ. ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಲವಾರು ಸಾಮಾಜಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜ ಬದಲಾವಣೆಯೊಂದಿಗೆ ಮನುಷ್ಯ ನೆಮ್ಮದಿ ಜೀವನಕ್ಕೆ ಸಹಕಾರಿಯಾಗಿದೆ. ಭವಿಷ್ಯದ ಪೀಳಿಗೆಗೆ ಧಾರ್ಮಿಕ ಶಿಕ್ಷಣ ಸಿಕ್ಕಾಗ ಮಾನವೀಯ ಮೌಲ್ಯ ಮೇಲೈಸುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಿರ್ದೇಶಕ ಪ್ರವೀಣ್ ಕುಮಾರ್ ಹೇಳಿದರು.

ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಆಲಂಕಾರು ವಲಯ ಜನಜಾಗೃತಿ ವೇದಿಕೆ, ನವಜೀವನ ಸಮಿತಿ , ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಗುಡ್ಡಪ್ಪ ಬಲ್ಯ ಧಾರ್ಮಿಕ ಉಪನ್ಯಾಸ ನೀಡಿ, ಮಾನವೀಯ ಮೌಲ್ಯಗಳು ಕಳೆಗುಂದಿತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಹೃದಯ ಅರಳಿಸುವ ಶಿಕ್ಷಣ ಅಗತ್ಯವಿದೆ ಎಂದರು.

ಜನಜಾಗೃತಿ ವೇದಿಕೆ ಆಲಂಕಾರು ವಲಯ ಅಧ್ಯಕ್ಷ ಇಂದುಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಾಮೋದರ ಕಕ್ವೆ, ಆಲಂಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಾನಂದ ಆಚಾರ್ಯ, ಆಲಂಕಾರು ವಲಯ ಪ್ರಗತಿಬಂಧುಇ ಸ್ವಸಹಾಯ ಸಂಘಗಳ ಒಕ್ಕೂಟ ವಲಯಾಧ್ಯಕ್ಷ ಬಾಲಕ್ರಷ್ಣ ಗೌಡ ಶುಭಹಾರೈಸಿದರು. ನವಜೀವನ ಸಮಿತಿ ಸದಸ್ಯರನ್ನು ಗೌರವಇಸಲಾಯಿತು. ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಪ್ರಸ್ತಾವಿಸಿ ಸ್ವಾಗತಿಸಿದರು. ಕುಂತೂರು ಒಕ್ಕೂಟದ ಸದಸ್ಯ ಚೆನ್ನಕೇಶವ ರೈ ಗುತ್ತುಪಾಲು ವಂದಿಸಿದರು. ಯೋಜನೆಯ ಕಡಬ ವಲಯ ಮೇಲ್ವಿಚಾರಕ ರವಿಪ್ರಸಾದ್ ಅಲಾಜೆ ನಿರೂಪಿಸಿದರು.

Leave A Reply

Your email address will not be published.