ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ| ನಾಲ್ವರ‌ ಬಂಧನ

ಮಂಗಳೂರು : ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಲ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ‌ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು‌ ಮಂಗಳೂರು ‌ಪೊಲೀಸರು‌ ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಫೋಕ್ಸೋ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ನಾಲ್ವರು ಆರೋಪಿಗಳನ್ನು ಪೊಲೀಸರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬಂಧಿಸಿದ್ದಾರೆ. ರಶೀದ್‌ ಸಾಹೇಬ್ ( 73), ಮೊಹಮ್ಮದ್ ಆಲಿ ( 74), ಗ್ರೆಗರಿ ಲಿಯೋನಾರ್ಡ್‌ ಸಿಕ್ವೇರಾ ( 62) ಹಾಗೂ ಇಸ್ಮಾಯಿಲ್ ( 41) ಬಂಧಿತರು.

ಗ್ರಾಹಕರ ರೀತಿಯಲ್ಲಿ ಬಂದು ಈ ನಾಲ್ವರು ಆರೋಪಿಗಳು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಈ ಬಗ್ಗೆ ಮಂಗಳೂರಿನ ಮಹಿಳಾ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.