ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ಇನ್ನಿತರ ಕೌಶಲ್ಯಾಭಿವೃದ್ಧಿಗಳ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ

Share the Article

ರಾಯಚೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು.

ತರಬೇತಿಗಳು: ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ (30ದಿನಗಳು), ಮಹಿಳೆಯರಿಗಾಗಿ ಹೊಲಿಗೆ ತರಬೇತಿ (30 ದಿನಗಳು), ಮಹಿಳೆಯರಿಗಾಗಿ ಸೌಂದರ್ಯ ವರ್ಧಕಕಲೆ (30 ದಿನಗಳು). ಈ ಮೇಲಿನ ತರಬೇತಿಗಳನ್ನು ನೀಡಲಾಗುತ್ತಿದ್ದು, ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿಯೊಂದಿಗೆ ತರಬೇತಿ ನೀಡಲಾಗುವುದು.

ದಾಖಲೆಗಳು:

ಆಧಾರ್ ಕಾರ್ಡ್, ಪಡಿತರ ಚೀಟಿ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ-4
ಹತ್ತನೇ ತರಗತಿ ವ್ಯಾಸಂಗ ಮಾಡಿರುವ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದೇ ಮಾ.10ರೊಳಗಾಗಿ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply