ರಾಜ್ಯದಲ್ಲಿ ಇನ್ಮುಂದೆ ವರ್ಷಕ್ಕೆ 2 ಬಾರಿ TET ಪರೀಕ್ಷೆ : ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು : ಶಿಕ್ಷಣ ಇಲಾಖೆಯು 2022-23 ನೇ ಸಾಲಿನಿಂದ ಪ್ರತಿ ವರ್ಷ ಜನವರಿ ಮತ್ತು ಜೂನ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶನ ನೀಡಿದೆ.

ನಾನಾ ಕಾರಣಗಳಿಂದ ಪ್ರತಿ ವರ್ಷ ಟಿಇಟಿ ಪರೀಕ್ಷೆ ವಿಳಂಬವಾಗುತ್ತಿದೆ. ಎರಡು ಮೂರು ವರ್ಷಗಳಿಗೊಮ್ಮೆ ಪರೀಕ್ಷೆ ನಡೆಯುತ್ತಿದೆ. ರಾಜ್ಯದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಬಿ.ಇಡಿ ಹಾಗೂ ಡಿ.ಇಡಿ‌ ಕೋರ್ಸ್ ಪೂರೈಸಿ ಕಾಲೇಜುಗಳಿಂದ ಹೊರಬರುತ್ತಿದ್ದಾರೆ. ಹೀಗಾಗಿ ಟಿಇಟಿ ಪರೀಕ್ಷೆ ನಡೆಯದೇ ಈ ಅಭ್ಯರ್ಥಿಗಳು ಶಿಕ್ಷಕರಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದೆ.

Leave A Reply

Your email address will not be published.