ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್ !! | ಸೋಲಿನ ಹೊಣೆ ಹೊತ್ತ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ರಾಜೀನಾಮೆಗೆ ಕ್ಷಣಗಣನೆ

Share the Article

ಪಂಜಾಬ್‌ನ ವಿಧಾನಸಭಾ ಚುನಾವಣೆಯಲ್ಲಿ
ಕಾಂಗ್ರೆಸ್ ಹೀನಾಯ ಸೋಲುಂಡಿದ್ದು, ಸೋಲಿನ ಹೊಣೆ ಹೊತ್ತ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಮುಂಜಾನೆ ಚರಣ್‌ಜಿತ್ ತಮ್ಮ ಚಂಡೀಗಢದಲ್ಲಿರುವ ನಿವಾಸಕ್ಕೆ ಆಗಮಿಸಿದ್ದಾರೆ.
ಪಂಚರಾಜ್ಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಚರಣ್‌ಜಿತ್ ಸ್ಪರ್ಧಿಸುತ್ತಿರುವ ಎರಡು ಕ್ಷೇತ್ರಗಳಾದ ಚಮಕೌರ್ ಸಾಹಿಬ್ ಹಾಗೂ ಭದೌರ್ ಕ್ಷೇತ್ರಗಳಲ್ಲಿ ಸದ್ಯ ಹಿನ್ನೆಡೆಯಾಗಿದೆ.

ಇದೀಗ ಪಂಜಾಬ್‌ನಲ್ಲಿ ಕಾಂಗ್ರೆಸ್ ಸೋಲುವುದು ಬಹುತೇಕ ಖಚಿತವಾಗಿದ್ದು, ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ. ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಭಾರಿ ಮುನ್ನಡೆ ಗಳಿಸಿದೆ.

Leave A Reply