ಸವಣೂರು : ಜಿಲ್ಲಾ ಮಟ್ಟದ ಯುವ ಸಮಾವೇಶ ಹಾಗೂ ತರಬೇತಿ ಕಾರ್ಯಗಾರ
ಸವಣೂರು : ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಭಾರತ ಸರಕಾರ. ನೆಹರೂ ಯುವ ಕೇಂದ್ರ ಮಂಗಳೂರು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು, ಸವಣೂರು ಯುವಕ ಮಂಡಲ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವ ಸಮಾವೇಶ ಹಾಗೂ ತರಬೇತಿ ಕಾರ್ಯಗಾರವು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರಿನಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಮಾತನಾಡಿ, ತಾವು ಯುವಕ ಮಂಡಲದಲ್ಲಿ ಹಾಗೂ ಸುಳ್ಯ ಯುವಜನ ಸಂಯುಕ್ತ ಮಂಡಳಿಯಲ್ಲಿ ತೊಡಗಿಸಿಕೊಂಡ ಅನುಭವಗಳನ್ನು ಹಂಚಿಕೊಂಡರು.
ಪುತ್ತೂರು ಎಪಿಎಂಸಿಯ ಅಧ್ಯಕ್ಷ ದಿನೇಶ್ ಮೆದು ಶುಭ ಹಾರೈಸಿದರು.
ಇತ್ತೀಚೆಗೆ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡ ಡಾ.ರಾಜಲಕ್ಷ್ಮಿ ಎಸ್ ರೈ ಅವರಿಗೆ ಸವಣೂರು ಯುವಕ ಮಂಡಲದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.
ಸವಣೂರು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ರಾಜೀವಿ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ದೈಹಿಕ ಶಿಕ್ಷಕರಾದ ಮಾಮಚ್ಚನ್ ಮ್ಯಾಥೀವ್, ಆಡಳಿತಾಧಿಕಾರಿಯಾದ ಅಶ್ವಿನಿ ಶೆಟ್ಟಿ, ಸವಣೂರು ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಮಾಲೆತ್ತಾರು,
ಹಾಗೂ ತರಬೇತುದಾರರಾದ ರಾಕೇಶ್ ರೈ ಕೆಡೆಂಜಿ ಮತ್ತು ಸುರೇಶ್ ಎಂ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಯುವಜನ ಒಕ್ಕೂಟದ ಗೌರವ ಅಧ್ಯಕ್ಷರಾದ ಸುಬ್ರಹ್ಮಣ್ಯ ಕರುಂಬಾರು, ಅಧ್ಯಾಪಕ ವೃಂದ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಸಭಾಕಾರ್ಯಕ್ರಮದ ಬಳಿಕ ತರಬೇತುದಾರರಿಂದ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ನೆರವೇರಿತು.
ನೆಹರು ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಅಧಿಕಾರಿಗಳಾದ ರಘುವೀರ್ ಸೂಟರ್ ಪ್ರಸ್ತಾವನೆಗೈದರು.
ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿದರು.ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕರಾದ ಗೌತಮ್ ರಾಜ್ ಕರುಂಬಾರು ವಂದಿಸಿದರು. ಸವಣೂರು ಯುವಕ ಮಂಡಲದ ಮಾರ್ಗದರ್ಶಕ ಗಿರಿಶಂಕರ ಸುಲಾಯ ಕಾರ್ಯಕ್ರಮ ನಿರೂಪಿಸಿದರು.