ಉತ್ತರ ಪ್ರದೇಶದಲ್ಲಿ ಕೇಸರಿ ಶಲ್ಯದ ಅಬ್ಬರಕ್ಕೆ ಸೈಕಲ್ ಪಂಚರ್!! | 37 ವರ್ಷಗಳ ಬಳಿಕ ದಾಖಲೆ ಬರೆದು ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದ ‘ಯೋಗಿ’

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ನಿರ್ಣಾಯಕ ಹಂತದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗಿದೆ. ಯೋಗಿ ಆದಿತ್ಯನಾಥ್‌ ಅವರ ಅಭಿವೃದ್ಧಿ ಮಂತ್ರದಿಂದ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಲಿದ್ದು, ಬಿಜೆಪಿ ಬರೋಬ್ಬರಿ 37 ವರ್ಷಗಳ ಬಳಿಕ ಸತತ 2 ನೇ ಬಾರಿಗೆ ‘ಯೋಗಿ ಸರ್ಕಾರ’ ರಚನೆಯಾಗುತ್ತಿದೆ.

 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಕಮಾಲ್ ಮಾಡಿದ್ದು, ಸಿಎಂ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಸತತ 2ನೇ ಬಾರಿಗೆ ಅಧಿಕಾರಿದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಧಕ್ಕಿಂತ ಹೆಚ್ಚು ಅಂದರೆ 271 ಸ್ಥಾನಗಳಲ್ಲಿ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿ ನಿಂತಿದೆ. ಇನ್ನು 2ನೇ ಅತೀ ದೊಡ್ಡ ಪಕ್ಷವಾಗಿ ಸಮಾಜವಾದಿ ಪಕ್ಷವು ಇದ್ದು ಈ ವರೆಗಿನ ಫಲಿತಾಂಶದಲ್ಲಿ ಎಸ್ ಪಿ ಪಕ್ಷ 125 ಸ್ಥಾನಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಂಡಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಗಳಿಸಿದರೆ, 1985ರ ಬಳಿಕ ಇದೇ ಮೊದಲ ಬಾರಿಗೆ ಆಡಳಿತ ಪಕ್ಷವೇ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಿದಂತಾಗಲಿದೆ. ಅಂತೆಯೇ ಯೋಗಿ ಆದಿತ್ಯನಾಥ್ ಅವರೇ ಇನ್ನೊಂದು ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದರೆ ಅದೂ ಸಹ ದಾಖಲೆಯಾಗಲಿದೆ.

ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ
1950ರ ಬಳಿಕ ಇದೇ ಮೊದಲ ಬಾರಿಗೆ, ಐದು ವರ್ಷಗಳ ಪೂರ್ಣಾವಧಿ ಆಡಳಿತ ನಡೆಸಿದ ಬಳಿಕ ಮತ್ತೆ ಅಧಿಕಾರ ಉಳಿಸಿಕೊಂಡ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಗುರುತಿಸಿಕೊಳ್ಳಲಿದ್ದಾರೆ. 1950ರಿಂದ 54ರ ವರೆಗೆ ಗೋವಿಂದ ವಲ್ಲಭ ಪಂತ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 1955ರಿಂದ 61 ರವರೆಗೆ ಅವರೇ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದರು.

2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಎಸ್‌ಪಿ– 47, ಬಿಎಸ್‌ಪಿ– 19 ಹಾಗೂ ಕಾಂಗ್ರೆಸ್‌– 07ರಲ್ಲಿ ಗೆಲುವು ಸಾಧಿಸಿದ್ದವು.

Leave A Reply

Your email address will not be published.