ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಕಡಬ ಸಿವಿಲ್ ಎಂಜಿನಿಯರ್ ಮೃತ್ಯು

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ.

ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರು ಜನನಿ ಕನ್ನಕ್ಷನ್‌ನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಸಚಿನ್ (28) ಎಂದು ಗುರುತಿಸಲಾಗಿದೆ. ಸಚಿನ್ ಬುಧವಾರ ಬೆಳಿಗ್ಗೆ 3:30 ಗಂಟೆಗೆ ಪಡುಬಿದ್ರೆ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದಾಗ ಬಪ್ಪನಾಡು ಬಳಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಳಿಕ ಅವರ ತಲೆ ಹೆದ್ದಾರಿ ಡಿವೈಡರ್‌ಗೆ ಅಪ್ಪಳಿಸಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡ ಸಚಿನ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave A Reply