ಕಾಲೇಜು ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ !! | 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಫುಡ್ ಪಾಯಿಸನ್‌ನಿಂದ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

 

ನಿನ್ನೆ ಮಧ್ಯಾಹ್ನ ಹಾಸ್ಟೆಲ್‌ನಲ್ಲಿ ಊಟ ಮಾಡಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ವೇಳೆಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಫುಡ್ ಪಾಯಿಸನ್‌ನಿಂದಾಗಿ ಈ ರೀತಿಯಾಗಿದ್ದು, ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರನ್ನು ಆದಷ್ಟು ಬೇಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

Leave A Reply

Your email address will not be published.