ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಾರ್ಚ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಬಾಗಲಕೋಟೆ ಜಿಲ್ಲೆಯ ಪಂಚಾಯತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಅಲೆಮಾರಿ ಸಮುದಾಯ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಂಭಾವನೆ : ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ ಇರುವ ಸ್ಥಳ :

ಬೀಳಗಿ ತಾಲೂಕಿನ ಸಿದ್ದಾಪೂರ ಗ್ರಾಮಪಂಚಾಯತಿ ಗ್ರಂಥಾಲಯ ( ಸಾಮಾನ್ಯ ಅಭ್ಯರ್ಥಿಗಳಿಗೆ)

ಮುಧೋಳ ತಾಲೂಕಿನ ಲೋಕಾಪೂರ ಪಟ್ಟಣ ಪಂಚಾಯತಿ ಗ್ರಂಥಾಲಯ ( 2 ಎ- ಮಾಜಿ ಸೈನಿಕ

ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮಪಂಚಾಯತಿ ಗ್ರಂಥಾಲಯ ( ಸಾಮಾನ್ಯ ಮಹಿಳಾ‌ ಅಭ್ಯರ್ಥಿ )

ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮಪಂಚಾಯತಿ ಗ್ರಂಥಾಲಯಕ್ಕೆ ಕೊಳಚೆ‌ ಮತ್ತು ಅಲೆಮಾರಿ ಸಮುದಾಯದ ಕೆರೊರ ( ಚಿನಗುಂಡಿ ಪ್ಲಾಟ್) ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

10 ನೇ ತರಗತಿ ಪಾಸಾದ ಅಭ್ಯರ್ಥಿಗಳು, 18 ವರ್ಷ ಪೂರೈಸಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಮಾರ್ಚ್ 30 ರೊಳಗೆ ಸಂಬಂಧಪಟ್ಟ ಆಯಾ ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಲ್ಲಿ ಸಲ್ಲಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಂಥಾಲಯ ಮುಖ್ಯ ಗ್ರಂಥಪಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು : ಆಧಾರ್ ಕಾರ್ಡ್, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ

Leave A Reply

Your email address will not be published.