ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ !!

Share the Article

ಆಸ್ಪತ್ರೆಯಲ್ಲಿ ನವಜಾತು ಶಿಶುವೊಂದು ಸಾವನ್ನಪ್ಪಿ, ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಶಿಶುವನ್ನು ಕಿರಾತಕರು ಎರಡು ದಿನಗಳ ಹಿಂದೆ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಹೆಣ್ಣು ಮಗು ಇರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಮಕ್ಕಳ ಅಭಿವೃದ್ಧಿ ಅಧಿಕಾರಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. FSL ವರದಿಗಾಗಿ ಕಳುಹಿಸಲು ನಿರ್ಧಾರ ಮಾಡಿದ್ದು ,ಮರಣೋತ್ತರ ಪರೀಕ್ಷೆ ನಂತರ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.

ಇನ್ನು ಆಸ್ಪತ್ರೆಯಲ್ಲಿ ಯಾವುದೇ ಗರ್ಭಪಾತದ ಕೇಸ್ ಇಲ್ಲ ಎಂಬ ಮಾಹಿತಿ ಸಿಕ್ಕಿದೆ. ಯಾರೋ ಕಿಡಿಗೇಡಿಗಳು ಹೊರಗಿನಿಂದ ತಂದು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಆಸ್ಪತ್ರೆಯ ಕೆಲ ಸಿಬ್ಬಂದಿ ವರ್ಗ ಶಾಮೀಲಾಗಿರುವ ಅನುಮಾನ ಕೂಡ ವ್ಯಕ್ತವಾಗಿದ್ದು, ಈ ಕುರಿತು ಚನ್ನಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave A Reply

Your email address will not be published.