ಕರಾವಳಿಯಲ್ಲಿ ಇಂದು ರಾತ್ರಿ ಮತ್ತು ನಾಳೆ ಮಳೆ ಸಂಭವ| ಮಲೆನಾಡಿನಲ್ಲೂ ವರುಣನ ಆರ್ಭಟ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

Share the Article

ಇಂದು ರಾತ್ರಿ ಮತ್ತು ನಾಳೆ ಮುಂಜಾನೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ಇಂದು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ತಮಿಳುನಾಡು, ಪುದುಚೇರಿ ಮತ್ತು ಕೇರಳದಾದ್ಯಂತ ಚದುರಿದ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 3 ದಿನಗಳಲ್ಲಿ ಕೇರಳ, ಮಾಹೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಕೇರಳದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೇರಳದ ಕೊಲ್ಲಂ, ಪತ್ತಿನಾಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ವಯನಾಡು ಜಿಲ್ಲೆಗಳಲ್ಲಿ ಮಾರ್ಚ್ 12 ರವರೆಗೆ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

Leave A Reply