ಮಗಳೊಂದಿಗೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ!! ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಿಂದ ಪತಿಯ ಬರ್ಬರ ಹತ್ಯೆ

Share the Article

ಕುಡಿತದ ಅಮಲಿನಲ್ಲಿ ಜಗಳ ಮಾಡುತ್ತಿದ್ದ ಪತಿಯನ್ನು ಮಗಳೊಂದಿಗೆ ಸೇರಿ ಕೊಲೆ ಮಾಡಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಕೊಲೆ ನಡೆಸಿದ ಆರೋಪಿಯನ್ನು ಧಾರವಾಡ ಜಿಲ್ಲೆಯ ತಾಲೂಕೊಂದರ ಬಿಜೆಪಿ ಮಹಿಳಾ ಮೋರ್ಚಾ ದ ಅಧ್ಯಕ್ಷೆ ಶೋಭಾ ಅಮರ್ ಗೋಳ್ ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ಪ್ರತಿನಿತ್ಯ ಕುಡಿದು ಜಗಳ ಮಾಡುವುದಲ್ಲದೇ ಅವಾಚ್ಯ ಶಬ್ದಗಳಿಂದ ಬೈದ್ದು ಕಿರುಕುಳ ನೀಡುತ್ತಿದ್ದನು.ಇದರಿಂದ ಬೇಸತ್ತ ಪತ್ನಿ ಮಹಿಳಾ ಮೋರ್ಚಾ ಅಧ್ಯಕ್ಷೆ ತನ್ನ ಮಗಳೊಂದಿಗೆ ಸೇರಿ ಪತಿಯನ್ನು ಬರ್ಬರವಾಗಿ ಕೊಂದಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Leave A Reply