ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ, ಬಾಣಂತಿ ಸಾವು!! ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಕುಟುಂಬಸ್ಥರ ಪ್ರತಿಭಟನೆ

ಸಹಜ ಹೆರಿಗೆಯ ಮೂಲಕ ಮಗುವಿಗೆ ಜನ್ಮ ನೀಡಿದ ಬಾಣಂತಿ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ನೇರ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಮುಂಭಾಗ ಧರಣಿ ಕುಳಿತ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ಎಂಬಲ್ಲಿ ನಡೆದಿದೆ.

 

ಮೃತ ಮಹಿಳೆಯನ್ನು ಸವಿತಾ(22) ಎಂದು ಗುರುತಿಸಲಾಗಿದೆ. ಮಾರ್ಚ್ 10 ರಂದು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸವಿತಾ ಸಹಜ ಹೆರಿಗೆಯ ಮೂಲಕ ಮಗುವಿಗೆ ಜನ್ಮ ನೀಡಿದ್ದರು. ಆ ಬಳಿಕ ತೀವ್ರ ರಕ್ತಸ್ರಾವವಾಗಿದ್ದು ಕೂಡಲೇ ಬೇರೆಡೆಯಿಂದ ರಕ್ತ ಪೂರೈಸಲು ತಿಳಿಸಲಾಗಿತ್ತು.

ಪರಿಸ್ಥಿತಿ ಕೈಮೀರುವ ಹೊತ್ತಲ್ಲೇ ಬಾಣಂತಿ ಹಾಗೂ ಮಗುವನ್ನು ಚೆನ್ನಾಗಿದ್ದಾರೆ ಎಂದು ನಂಬಿಸಿ ವೈದ್ಯಯು ಕಳುಹಿಸಿಕೊಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಸಾವಿಗೀಡಾಗಿದ್ದಾರೆ. ವಿಷಯ ತಿಳಿಯುತ್ತಲೇ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದು ಧರಣಿ ನಡೆಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Leave A Reply

Your email address will not be published.