ರಾಜ್ಯದ ರೈತರಿಗೆ ಸಿಹಿ ಸುದ್ದಿ : ಕೃಷಿ ಪಂಪ್ಸೆಟ್ ಗೆ ಸೌರ ವಿದ್ಯುತ್
ಕೃಷಿ ಪಂಪ್ಸೆಟ್ ಗಳಿಗೆ ಸೌರವಿದ್ಯುತ್ ಕಲ್ಪಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ರೈತರ ಜಮೀನಿನಲ್ಲಿ ಸೌರ ಪ್ಯಾನೆಲ್ ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಲಿದ್ದು, ಬೇರೆ ವಿದ್ಯುತ್ ಸಂಪರ್ಕವಿಲ್ಲದೆ ಪಂಪ್ ಸೆಟ್ ಬಳಕೆ ಸಾಧ್ಯವಾಗಲಿದೆ.
ರಾಜ್ಯದಲ್ಲಿ ಸುಮಾರು 10,000 ರೈತರಿಗೆ ಈ ಸೌಲಭ್ಯ ನೀಡಲಾಗುವುದು. ಜಮೀನಿನಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಿ ಉತ್ಪಾದನೆಯಾಗುವ ವಿದ್ಯುತ್ ನ್ನು ಕೃಷಿ ಪಂಪ್ಸೆಟ್ ಗಳಿಗೆ ಬಳಕೆ ಮಾಡಲಾಗುವುದು. ಯಾವುದೇ ವಿದ್ಯುತ್ ಜಾಲದಿಂದ ಸಂಪರ್ಕ ಪಡೆಯುವ ಅಗತ್ಯ ಇರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ಯೋಜನೆ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಲಾಗಿದೆ.