ಹಿಜಾಬ್ ವಿಚಾರಣೆಯ ಹೈಕೋರ್ಟ್ ತೀರ್ಪು ಹಿನ್ನೆಲೆ!! ಜಿಲ್ಲೆಯಾದ್ಯಂತ ಕಟ್ಟೆಚ್ಚರ-ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಾರ್ಚ್ 15 ರ ಮಂಗಳವಾರ ಮುಂಜಾನೆ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ನೀಡುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಿದ ಬೆನ್ನಲ್ಲೇ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಾಲಾ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇದಾಜ್ಞೆ ಹೇರಲಾಗಿದೆ ಎಂದು ತಿಳಿದುಬಂದಿದೆ.