ರಾಮಕುಂಜ: ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ!! ಓರ್ವ ಗಂಭೀರ-ಆಸ್ಪತ್ರೆಗೆ ದಾಖಲು

ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಜಂಕ್ಷನ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ.

ಪೆರಿಯಡ್ಕ ಸಮೀಪದ ಓಡ್ಡದಲ್ಲಿ ತೋಟದ ಕೆಲಸ ನಿರ್ವಹಿಸುತ್ತಿದ್ದ ದಾವಣಗೆರೆ ನಿವಾಸಿ ರಾಜು ಎಂಬವರು ತನ್ನ ಬೈಕ್‌ನಲ್ಲಿ ಗೋಳಿತ್ತಡಿಗೆ ಬರುತ್ತಿದ್ದ ವೇಳೆ ಆಲಂಕಾರು ಕಡೆಯಿಂದ ಉಪ್ಪಿನಂಗಡಿಗೆ ಹೋಗುತ್ತಿದ್ದ ಬೈಕ್ ನಡುವೆ ಗೋಳಿತ್ತಡಿ ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ರಾಜು ಗಂಭೀರ ಗಾಯಗೊಂಡಿದ್ದು, ಇನ್ನೊಂದು ಬೈಕ್‌ನಲ್ಲಿದ್ದ ಸವಾರ ಹಾಗೂ ಸಹ ಸವಾರ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಆಂಬುಲೆನ್ಸ್‌ನಲ್ಲಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.