ಬೆಳ್ಳಂಬೆಳಗ್ಗೆನೇ ACB ರೈಡ್ : ರಾಜ್ಯದ 78 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ 200 ಕ್ಕೂ ಹೆಚ್ಚು ಅಧಿಕಾರಿಗಳು!

Share the Article

ಇಂದು ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಬೆಂಗಳೂರಿನ 3 ಕಡೆ ಸೇರಿದಂತೆ ರಾಜ್ಯದ 78 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇರೆಗೆ ರಾಜ್ಯದ 18 ಸರಕಾರಿ ಅಧಿಕಾರಿಗಳು, 78 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. 18 ಸರಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ 200 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಗದಗ ಡಿಸಿ ಕಚೇರಿಯ ಉಪತಹಶೀಲ್ದಾರ್ ಬಿ.ಎಸ್ ಅಣ್ಣಿಗೇರಿ ಮನೆ ಹಾಗೂ ಕಚೇರಿ ಸೇರಿದಂತೆ ಅಣ್ಣಿಗೇರಿ ಅವರ ಅಳಿಯನ ಮನೆ ಹಾಗೂ ಕಚೇರಿ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Leave A Reply