ಕಾಡು ಹಂದಿಗೆ ಕಾರು ಡಿಕ್ಕಿಯಾದ ಪರಿಣಾಮ ಹಂದಿ ಸೇರಿ ಮೂರು ಮಂದಿ ದಾರುಣ ಸಾವು !!

Share the Article

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಕಾಡುಹಂದಿ ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿ, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ‌ಜಿಲ್ಲೆಯ ಐಮಂಗಲ ಬಳಿ ನಡೆದಿದೆ.

ಅಪಘಾತಕ್ಕೀಡಾದ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿ ಇದ್ದರು. ಇವರು ಬೆಂಗಳೂರಿನಿಂದ ದಾವಣಗೆರೆ ದುರ್ಗದೇವಿ ಜಾತ್ರೆಗಾಗಿ ತೆರಳುತ್ತಿದ್ದರು. ಈ ವೇಳೆ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾಡುಹಂದಿಗೆ ಕಾರು ಡಿಕ್ಕಿ ಆಗಿದೆ. ಬಳಿಕ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾಡುಹಂದಿ ಕೂಡ ಸಾವನ್ನಪ್ಪಿದೆ.

ಸ್ಥಳಕ್ಕೆ ಡಿವೈಎಸ್ಪಿ ರೋಷರ್ ಜಮೀರ್, ವೃತ್ತ ನಿರೀಕ್ಷಕ ರಾಘವೇಂದ್ರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಐಮಂಗಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply