ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮೇಲ್ಮನವಿಗೆ ಹಿನ್ನೆಡೆ | ಇಂದು ವಿಚಾರಣೆ ನಡೆಸುವುದಿಲ್ಲ ಎಂದು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್ !!

ನವದೆಹಲಿ:ಹಿಜಾಬ್ ಕುರಿತು ನಿನ್ನೆ ನಡೆದ ವಿಚಾರಣೆ ಬಳಿಕ ಹೊರಬಂದ ತೀರ್ಪಿನಲ್ಲಿ ರಾಜ್ಯ ಸರ್ಕಾರ ನೀಡಿರುವ ಆದೇಶ ಕಾನೂನುಬದ್ಧವಾಗಿದ್ದು,ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೈಕೋರ್ಟ್ ತಿಳಿಸಿತ್ತು.ಈ ತೀರ್ಪುನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪರ ವಕೀಲರು ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಸೋಮವಾರದಿಂದ ಪರೀಕ್ಷೆ ಶುರುವಾಗಲಿರುವ ಹಿನ್ನೆಲೆಯಲ್ಲಿ ಕೂಡಲೇ ಅರ್ಜಿಯ ವಿಚಾರಣೆ ನಡೆಸಿ ಎಂದು ಮೇಲ್ಮನವಿದಾರರ ಪರ ವಕೀಲರು ಸುಪ್ರೀಂಕೋರ್ಟ್​ ಅನ್ನು ಕೋರಿದ್ದರು.ಆದರೆ ಸುಪ್ರೀಂಕೋರ್ಟ್​ ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಲು ತಿರಸ್ಕರಿಸಿದ್ದು, ಹೋಳಿ ಹಬ್ಬ ಮುಗಿದ ಮೇಲೆ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.

ಈ ನಡುವೆಯೇ ಹಿಂದೂ ಸೇನಾದ ಅಧ್ಯಕ್ಷ ಸುರ್ಜಿತ್ ಯಾದವ್ ಅವರು ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದು,ಹೈಕೋರ್ಟ್​ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ಹೊರಡಿಸುವ ಪೂರ್ವದಲ್ಲಿ ತಮ್ಮ ವಾದವನ್ನೂ ಆಲಿಸಬೇಕು ಎಂದು ಅವರು ಕೋರಿದ್ದಾರೆ.

Leave A Reply

Your email address will not be published.