ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ 79 ಹುದ್ದೆಗಳು | ಪದವೀಧರರಿಂದ ಅರ್ಜಿ ಆಹ್ವಾನ!
ಕರ್ನಾಟಕ ಸರಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆ ದಿನವಾಗಿದೆ.
ನೇಮಕಾತಿ ಬ್ಯಾಂಕ್ :ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ
ಹುದ್ದೆಯ ಹೆಸರು : ಬ್ಯಾಂಕ್ ಸಹಾಯಕರ ಹುದ್ದೆಗಳು.
ಹುದ್ದೆ ಸಂಖ್ಯೆ : 79
ವಿದ್ಯಾರ್ಹತೆ : ಯಾವುದೇ ಪದವಿ
ಒಟ್ಟು ಇರುವ 79 ಹುದ್ದೆಗಳ ಪೈಕಿ ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ಅಭ್ಯರ್ಥಿಗಳಿಗೆ 7 ಹುದ್ದೆಗಳು ಮೀಸಲಿವೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-03-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-04-2022 ರ ಸಂಜೆ 05-30 ರವರೆಗೆ.
ವೇತನ : ರೂ.28,425 ರಿಂದ 87125 ರೂ.ವರೆಗೆ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ಪರೀಕ್ಷೆಯಲ್ಲಿ ಭಾಷಾ ವಿಷಯಗಳು ಸೇರಿದಂತೆ ಸಾಮಾನ್ಯ / ಒಬಿಸಿ ಅಭ್ಯರ್ಥಿಗಳು ಕ್ರೋಡೀಕೃತ ಶೇಕಡ 60 ಅಂಕಗಳೊಂದಿಗೆ ಹಾಗೂ ಎಸ್ಸಿ / ಎಸ್ಟಿ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಶೇಕಡ.55 ರಷ್ಟು ಅಂಕಗಳೊಂದಿಗೆ ಪಾಸ್ ಮಾಡಿರಬೇಕು.
ಕನ್ನಡ ಭಾಷೆಯನ್ನು ಓದುವುದರ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ವಚ್ಛವಾಗಿ ಮಾತನಾಡುವ ತಿಳುವಳಿಕೆ ಮತ್ತು ಅರ್ಥಮಾಡಿಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ.
ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಪ್ರಸ್ತುತ ಒಟ್ಟು 79 ಹುದ್ದೆಗಳಿದ್ದರೂ ನೇಮಕಾತಿ ಸಂದರ್ಭದಲ್ಲಿ ಅವಶ್ಯಕತೆಗನುಗನಿಸಾರವಾಗಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸುವ ಅಥವಾ ಕಡಿಮೆ ಮಾಡುವ ಅಧಿಕಾರವನ್ನು ಬ್ಯಾಂಕ್ ಹೊಂದಿರುತ್ತದೆ.
ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಎಸ್‌ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನೀಡಲಾಗಿದೆ.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ಇದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ಇದೆ.
- ಅಂಗವಿಕಲ ಅಭ್ಯರ್ಥಿಗಳಿಗೆ ವರ್ಗಾವಾರು ವಯೋಮಿತಿ ಸಡಿಲಿಕೆ ಜತೆಗೆ 10 ವರ್ಷಗಳ ಸಡಿಲಿಕೆ ಸೇರಿಸಿ ಗರಿಷ್ಠ ವಯೋಮಿತಿ ಪರಿಗಣಿಸಲಾಗುತ್ತದೆ.
ಅರ್ಜಿ ಶುಲ್ಕ : ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 500/-, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.1000/- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.1000/-. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಪಾವತಿ ಮಾಡಬಹುದು.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.