ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ನಾಳೆ ‘ಕರ್ನಾಟಕ ಬಂದ್’ ಗೆ ಕರೆ ನೀಡಿದ ಮುಸ್ಲಿಂ ಸಮುದಾಯ|ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್!

ಬೆಂಗಳೂರು : ಹಿಜಾಬ್ ಕುರಿತು ಹೈ ಕೋರ್ಟ್ ನೀಡಿದ ತೀರ್ಪಿಗೆ ಅಸಮಾಧಾನಗೊಂಡ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಸ್ವಯಂಪ್ರೇರಿತ ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ.

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಭಿಪ್ರಾಯಪಟ್ಟ ಕರ್ನಾಟಕ ಹೈಕೋರ್ಟ್ʼನ ಹಿಜಾಬ್ ತೀರ್ಪನ್ನು ವಿರೋಧಿಸಿ ನಾಳೆ ರಾಜ್ಯಾದ್ಯಂತ ಬಂದ್ ಘೋಷಿಸಿದ್ದಾರೆ.ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ. ಯಾರ ಮೇಲೂ ಒತ್ತಾಯ ಹೇರಿ ಬಂದ್‌ ನಡೆಸದಿರುವಂತೆ ಒತ್ತಾಯಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ರಾಜಕೀಯ ನಾಯಕರು ಹಿಜಾಬ್ ವಿಚಾರವಾಗಿ ನಿನ್ನೆ ಅಮಿರ್ ಎ ಷರಿಯಾತ್ ಅವರ ನಿವಾಸದಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಸಲಿಂ ಅಹ್ಮದ್, ಜಮೀರ್ ಅಹ್ಮದ್ ಖಾನ್, ಯು.ಟಿ.ಖಾದರ್, ಎನ್.ಎ.ಹ್ಯಾರಿಸ್, ನಜೀರ್ ಅಹ್ಮದ್, ರೆಹಮಾನ್ ಖಾನ್, ಖನೀಜ್ ಫಾತಿಮಾ ಸೇರಿದಂತೆ ಇತರರು ಭಾಗಿಯಾಗಿದ್ದರು.

ಹೈಕೋರ್ಟ್ ತೀರ್ಪಿನ ಬಳಿಕ ವಿದ್ಯಾರ್ಥಿನಿಯರು ನೀಡಿದ್ದ ಹೇಳಿಕೆಗೆ ಧರ್ಮಗುರುಗಳು ಆಕ್ಷೇಪ ವ್ಯಕ್ತಪಡಿಸಿದ್ದು,ಸುದ್ದಿಗೋಷ್ಠಿಗೆ ಉತ್ತೇಜಿಸಿದ ಅವರ ವರ್ತನೆ ಸರಿ ಅಲ್ಲ, ಅವರಿಗೆ ಮಾರ್ಗದರ್ಶನ ಅಗತ್ಯವಿದೆ. ಹೈಕೋರ್ಟ್ ತೀರ್ಪಿನಿಂದ ಆತಂಕ ಪಡುವ ಅಗತ್ಯವಿಲ್ಲ. ಸಮವಸ್ತ್ರ ಇರುವಷ್ಟೇ ಆದೇಶ ಪಾಲನೆ ಮಾಡಲು ಹೇಳಿದೆ. ಸುಪ್ರಿಂಕೋರ್ಟ್‌ಗೆ ಹೋಗಲು ಸಹ ನಮಗೆ ಅವಕಾಶ ಇದ್ದು,ಈಗಾಗಲೇ ಕಪಿಲ್ ಸಿಬಲ್ ಜೊತೆ ಮಾತನಾಡಲಾಗಿದೆ. ಅನಗತ್ಯವಾಗಿ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ನಾಯಕರಿಗೆ ನಿನ್ನೆ ಅಮಿರ್ ಎ ಷರಿಯಾತ್ ಸೂಚನೆ ನೀಡಿದ್ದಾರೆ.

Leave A Reply

Your email address will not be published.