ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಶಾಕ್ | ನಂದಿನಿ ಹಾಲಿನ ದರ ಶೀಘ್ರದಲ್ಲೇ 3 ರೂ.ಹೆಚ್ಚಳ!
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಏರಿಕೆ ಮಾಡುವ ಚಿಂತನೆಯನ್ನು ಸರ್ಕಾರ ಈಗಾಗಲೇ ನಡೆಸಿದ್ದು,
ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡೋದಕ್ಕೆ ಸರಕಾರ ಸಜ್ಜಾಗಿದೆ ಎನ್ನಲಾಗಿದೆ.
ಕರ್ನಾಟಕ ಹಾಲು ಮಂಡಳಿ, ಕೊರೋನಾ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರಕ್ಕೆ ಎರಡು ರೂ ಹಾಲಿನ ದರ ಹೆಚ್ಚಳಕ್ಕೆ ಮನವಿ ಮಾಡಲಾಗಿತ್ತಾದರೂ, ಸರಕಾರ ಕೊರೊನಾ ಕಾರಣದಿಂದಾಗಿ ಕೆಎಂಎಫ್ ಪ್ರಸ್ತಾವನೆಯನ್ನು ನಯವಾಗಿಯೇ ತಿರಸ್ಕರಿಸಿತ್ತು. ಈಗ ಪೆಟ್ರೋಲ್, ಡೀಸೆಲ್ ದರ ಸೇರಿದಂತೆ ಸಾಗಾಣೆ ವೆಚ್ಚ ಕೂಡ ಏರಿಕೆಯಾದ ಕಾರಣ, ಈ ಹಿನ್ನಲೆಯಲ್ಲಿ ಶೀಘ್ರವೇ ನಂದಿನಿ ಹಾಲಿನ ದರ ಏರಿಕೆ ನಿರ್ಧಾರವನ್ನು ಸರ್ಕಾರ ಪ್ರಕಟಿಸೋ ಸಾಧ್ಯತೆ ಇದೆ.
ಈ ಬಗ್ಗೆ ಕರ್ನಾಟಕ ಹಾಲು ಮಹಾಮಂಡಳಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಿದ್ಧತೆ ನಡೆಸಿದ್ದು, ಸರ್ಕಾರಕ್ಕೂ ಈ ಸಂಬಂಧ ಪ್ರಸ್ತಾವನೆ ಸಲ್ಲಿಸಿದೆ. ಒಂದು ವೇಳೆ ರಾಜ್ಯ ಸರ್ಕಾರ ಕೆಎಂಎಫ್ ನಂದಿನ ಹಾಲಿನ ದರ ಏರಿಕೆ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ರೆ, ಮಾರ್ಚ್ ಅಂತ್ಯದೊಳಗೆ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ.