ಪ್ರೇಮ‌ ವೈಫಲ್ಯ : ಯುವಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೆ ಶರಣಾದ ಯುವಕ.

ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು, ನಿನ್ನೆಯೂ ಸಂಜೆವರೆಗೆ ಕರ್ತವ್ಯ ನಿರ್ವಹಿಸಿದ್ದರು. ದೀಕ್ಷಿತ್ ತಾಯಿ, ಸಹೋದರನನ್ನು ಅಗಲಿದ್ದಾನೆ.

Leave A Reply