ಶಾಲೆಗಳಲ್ಲಿ ಇನ್ನು ಮುಂದೆ ಭಗವದ್ಗೀತೆ ಅಧ್ಯಯನ !
ಹಿಂದುಗಳ ಪವಿತ್ರ ಧರ್ಮಗ್ರಂಥ ಭಗವದ್ಗೀತೆಯನ್ನು ಗುಜರಾತ್ ನ ಶಾಲೆಗಳಲ್ಲಿ ಪಠ್ಯಕ್ರಮವಾಗಿ ಸೇರಿಸಲಾಗುವುದು ಎಂದು ಗುಜರಾತ್ ನ ಶಿಕ್ಷಣ ಸಚಿವ ಜಿತು ವಾಘನಿ ಘೋಷಣೆ ಮಾಡಿದ್ದಾರೆ.
6 ರಿಂದ 12ನೇ ತರಗತಿಯ ಮಕ್ಕಳು ಪಠ್ಯಕ್ರಮದ ಭಾಗವಾಗಿ ಶ್ರೀಮದ್ ಭಗವದ್ಗೀತೆಯ ಸಾರವನ್ನು ಕಲಿಯಲಿದ್ದಾರೆ ಎಂದು ಗುಜರಾತ್ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ಹೊಸ ಶಿಕ್ಷಣ ನೀತಿಯಲ್ಲಿ ತಿಳಿಸಲಾಗಿದೆ.
ಶಾಲಾ ಮಕ್ಕಳಿಗೆ ಗೀತಾ ಜ್ಞಾನ ಮತ್ತು ಅದರ ಮೌಲ್ಯಗಳನ್ನು ತಿಳಿದುಕೊಳ್ಳಲು ಅನುವು ಮಾಡಿಕೊಡುವ ಸಲುವಾಗಿ ಗೀತಾ ಕುರಿತು ಭಾಷಣ ಸ್ಪರ್ಧೆ, ಶ್ಲೋಕ ಗಾನ, ಸಾಹಿತ್ಯ ಸ್ಪರ್ಧೆಯನ್ನೂ ಸಹ ಆಯೋಜಿಸಲಾಗುವುದು ಎಂದು ಸರ್ಕಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.