ಕಾದ ಇಳೆಗೆ ತಂಪೆರೆಯಲಿದ್ದಾನೆ ಮಳೆರಾಯ !! | ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ
ಹಿಂದೂ ಮಹಾಸಾಗರ ಹಾಗೂ ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಮಾರ್ಚ್ 17ರಂದು ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಮಳೆಯಾಗಲಿದೆ. ಮಾರ್ಚ್ 18ರಂದು ಮೈಸೂರು, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೆ ಮಾರ್ಚ್ 19ರಂದು ಮೈಸೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಮತ್ತು ಪಶ್ಚಿಮಘಟ್ಟದ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.