ಕಾಣಿಯೂರು : ಮರದಿಂದ ಬಿದ್ದು ಶಾಲಾ ಬಾಲಕ ಮೃತ್ಯು

ಕಡಬ: ಶಾಲೆ ಮುಗಿಸಿ ಮನೆಗೆ ಬಂದ ಬಾಲಕನೊಬ್ಬ ಪೇರಾಳ ಮರ ಹತ್ತಲು ಹೋಗಿ ಉರುಳಿ ಬಿದ್ದು ಮೃತಪಟ್ಟ ಧಾರುಣ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ಮಾ.17ರ ಸಂಜೆ ನಡೆದಿದೆ.

ದೋಳ್ವಾಡಿ ಮರಕ್ಕಡ ಮನೆಯ ದಿವಾಕರ ಗೌಡರವರ ಪುತ್ರ ಉಲ್ಲಾಸ್ ಡಿ.ಎಂ (8 ವ.) ಮೃತ ಬಾಲಕ.

ದೋಳ್ವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿಯಾಗಿರುವ ಉಲ್ಲಾಸ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.

ಉಲ್ಲಾಸ್ ಎಂದಿನಂತೆ ಮಾ.17ರಂದು ಕೂಡ ಶಾಲೆಗೆ ಹೋಗಿದ್ದು ಸಂಜೆ ಮನೆಗೆ ಹಿಂತಿರುಗಿದ್ದಾನೆ. ಮನೆಗೆ ಬಂದ ಬಳಿಕ ಮನೆ ಸಮೀಪದ ಪೇರಳೆ ಹಣ್ಣು ಕೊಯ್ಯಲು ಮರಕ್ಕೆ ಹತ್ತಿದ್ದು ಈ ವೇಳೆ ಅಯತಪ್ಪಿ ಕೆಳಕ್ಕೆ ಉರುಳಿದಾಗ ಕೆನ್ನಿ ಭಾಗಕ್ಕೆ ಏಟಾಗಿ ಮೃತಪಟ್ಟಿದ್ದಾನೆ.

ಸದ್ಯ ಬಾಲಕನ ಮೃತದೇಹದ ಮರಣೋತ್ತರ ಪರೀಕ್ಷೆಯು ಕಡಬ ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ.

ಮೃತ ಉಲ್ಲಾಸ್ ತಂದೆ ದಿವಾಕರ್, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

Leave A Reply

Your email address will not be published.