KPSC : ಖಾಲಿ ಇರುವ 136 ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಾಸಿಕ ವೇತನ ರೂ.62ಸಾವಿರ

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ‘ಸಿ’ ವೃಂದದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

 

ಹುದ್ದೆ : 136 ಕಿರಿಯ ಅಭಿಯಂತರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಮಾರ್ಚ್ 28,2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 27, 2022

ಈ ಹುದ್ದೆಗಳಿಗೆ ಸಿವಿಲ್/ಎನ್ವಿರಾನ್ಮೆಂಟ್/ಪಿಹೆಚ್ಇ ಯಲ್ಲಿ ಡಿಪ್ಲೋಮಾ ಅಥವಾ ಸಿವಿಲ್/ಎನ್ವಿರಾನ್ಮೆಂಟಲ್ ನಲ್ಲಿ ಬಿ.ಇ ಪದವಿ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ಯೊಳಗಿರಬೇಕು. ಪ್ರವರ್ಗ 2ಎ, 2 ಬಿ, 3ಎ, ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 33,450/- ರಿಂದ 62,600/- ರೂ.ಗಳ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 600/-ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಏಪ್ರಿಲ್ 28 ,2022ರೊಳಗೆ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.