SSLC ವಿದ್ಯಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ | ಮುಂಚಿತವಾಗಿ ಸಿಗಲಿದೆ ಪರೀಕ್ಷಾ ಕೊಠಡಿ ಮಾಹಿತಿ!
ಇನ್ನೇನು ಎಸ್ ಎಸ್ ಎಲ್ಸಿ ಪರೀಕ್ಷೆ ಬರಲಿದೆ. ವಿದ್ಯಾರ್ಥಿಗಳು ಪರೀಕ್ಷೆಯ ತಯಾರಿ ಮಾಡುವ ಜೊತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲಿರುವ ಕೊಠಡಿ ಸಂಖ್ಯೆ, ಆಸನಗಳ ಕುರಿತಾಗಿ ಮುಂಚಿತವಾಗಿ ಎಸ್ಎಂಎಸ್ ಮೂಲಕ ಮಾಹಿತಿ ನೀಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು, ಪೋಷಕರು ಗುಂಪುಗೂಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಮೊದಲೇ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ, ಕೊಠಡಿ, ಆಸನ ಸಂಖ್ಯೆ ಬಗ್ಗೆ ಮಾಹಿತಿಯನ್ನು ಎಸ್ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ.
ಕೊರೋನಾ ಸೋಂಕಿಗೊಳಗಾಗಿ ಮನೆಯಲ್ಲಿ ಐಸೋಲೇಷನ್ ನಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು, ವೈದ್ಯಾಧಿಕಾರಿಗಳ ಪ್ರಮಾಣ ಪತ್ರ ಪಡೆಯಬೇಕು. ಸೋಂಕಿತ ವಿದ್ಯಾರ್ಥಿಗಳನ್ನು ವೈದ್ಯಕೀಯ ತಂಡದೊಂದಿಗೆ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆ ಬರೆಸಲಾಗುವುದು ಎಂದು ಹೇಳಲಾಗಿದೆ.