ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ| ಭೀಕರ ಅಪಘಾತದಲ್ಲಿ ಮೃತರೆಲ್ಲರೂ ಶಾಲಾ – ಕಾಲೇಜು ವಿದ್ಯಾರ್ಥಿಗಳು !

0 10

ಶನಿವಾರ ಬೆಳಗ್ಗೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಭೀಕರ ಅಪಘಾತ ನಡೆದಿದೆ‌.

ಈ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತರೆಲ್ಲರೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.

ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಶನಿವಾರ ಬೆಳಗ್ಗೆ 9 ಗಂಟೆಯಲ್ಲಿ ಅಪಘಾತಕ್ಕೀಡಾಗಿದೆ. ಈ ಬಸ್ಸಿನಲ್ಲಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು.

ಸ್ಥಳದಲ್ಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಮತ್ತಷ್ಟು ಸಾವು-ನೋವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು, ಪಾಲಕರು ಮತ್ತು ಕುಟುಂಬಸ್ಥರ ಗೋಳಾಟ ಮುಗಿಲು ಮುಟ್ಟಿದೆ.

ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

Leave A Reply