ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆ ಸಾಧ್ಯತೆ !! | ಹವಾಮಾನ ಇಲಾಖೆಯಿಂದ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳನ್ನು ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 20, 21 ರಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನ ಕೊಪ್ಪಳ,ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ 20, 21 ರಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

19,20 ರಂದು ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ,ಹಾಸನ,ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ. ನಿನ್ನೆ ಕರಾವಳಿ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಮಳೆ ಸುರಿದಿದೆ. ಶಿರಸಿಯ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯಲ್ಲಿ ಗದ್ದುಗೆಯ ಎದುರು ನಿರ್ಮಿಸಿದ ಮುಂಭಾಗದ ಮಂಟಪದ ಗೋಪುರ ಗಾಳಿಯ ರಭಸಕ್ಕೆ ಕಳಚಿ ಬಿದ್ದಿದೆ. ಏಕಾಏಕಿ ಸುರಿದ ಮಳೆಗೆ ಜನರು ಕೆಲಕಾಲ ಪರದಾಡುವಂತಾಯಿತು.

Leave A Reply