ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಕೋಮಿನ ವ್ಯಕ್ತಿ | ಆರೋಪಿಯ ಬಂಧನ

ಮಂಗಳೂರು : ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ವಾಜಿದ್ ಎ ಜಮಖಾನಿ ಎನ್ನುವವನಾಗಿದ್ದು, ಹಾವೇರಿ ಜಿಲ್ಲೆಯವನೆಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಯ ದಿಂದ ಮಂಗಳೂರಿಗೆ ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಯುವತಿಗೆ ಆಕೆಯ ಸೀಟಿನ ಪಕ್ಕದಲ್ಲಿ ಕುಳಿತ ವಾಜಿದ್ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ.

ಈ ಬಗ್ಗೆ ಯುವತಿ ನೀಡಿದ ದೂರಿನನ್ವಯ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply