ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿಸುದ್ದಿ : ಉಚಿತ ಮನೆ ನಿರ್ಮಿಸಲು ಸರಕಾರದ ಪರಿಶೀಲನೆ

Share the Article

ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ನಿವೇಶನ ಇದ್ದರೆ ಸರ್ಕಾರದಿಂದ ಉಚಿತವಾಗಿ ಮನೆ ಕಟ್ಟುವ ಪ್ರಸ್ತಾವನೆಯ ವಿಷಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜ್ಯಕ್ಕೆ 18 ಲಕ್ಷ ಮನೆಗಳು ಮಂಜೂರಾಗಿವೆ. ಎರಡು ಲಕ್ಷ ಮನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ಇನ್ನು ಹೆಚ್ಚುವರಿಯಾಗಿ 3 ಲಕ್ಷ ಸೇರಿದಂತೆ ಐದು ಲಕ್ಷ ಮನೆಗಳನ್ನು ಕೂಡಲೇ ಮಂಜೂರು ಮಾಡಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಫಲಾನುಭವಿಗಳಿಗೆ ಆದಾಯದ ಮಿತಿ ಹೆಚ್ಚಳ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 32 ಸಾವಿರ ರೂ.ನಿಂದ 1.20 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ನಗರ ಪ್ರದೇಶದಲ್ಲಿ 87 ಸಾವಿರ ರೂ. ನಿಂದ 2 ಲಕ್ಷ ರೂ.ಗೆ, ಬೆಂಗಳೂರು ನಗರದಲ್ಲಿ 3 ಲಕ್ಷ ರೂಪಾಯಿಗೆ ಆದಾಯ ಮಿತಿ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ನಿವೇಶನವಿದ್ದಲ್ಲಿ ಸರ್ಕಾರದಿಂದ ಉಚಿತವಾಗಿ ಮನೆ ನಿರ್ಮಿಸಿಕೊಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ.

Leave A Reply

Your email address will not be published.