ಕಾಂಗ್ರೆಸ್ ಗೆ ‘ಕೈ’ ಕೊಟ್ಟ ಇನ್ನೊಬ್ಬ ಹಿರಿಯ ನಾಯಕ | ಸಕ್ರಿಯ ರಾಜಕಾರಣಕ್ಕೆ ಗುಲಾಂ ನಬಿ ಆಜಾದ್ ಗುಡ್ ಬೈ !!?
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತ್ಯಜಿಸುತ್ತಿದ್ದಾರೆ. ಅಂತೆಯೇ ಇದೀಗ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜಕೀಯ ನಿವೃತ್ತಿ ಪಡೆಯುವ ಸುಳಿವು ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಜಮ್ಮುವಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಸಮಾಜದಲ್ಲಿ ಬದಲಾವಣೆ ತರಬೇಕಿದೆ ಎಂದರು. ಕೆಲವೊಮ್ಮೆ ನಾವು ನಿವೃತ್ತಿ ಹೊಂದಿ ಸಮಾಜ ಸೇವೆ ಮಾಡಲು ಆರಂಭಿಸಿದ್ದೇನೆ ಎಂದು ಇದ್ದಕ್ಕಿದ್ದಂತೆ ಹೇಳಿದರೇ ನಿಮಗೆ ಅರ್ಥವಾಗುವುದು ದೊಡ್ಡ ವಿಷಯವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಜಿ-23 ಬಣದ ಪ್ರಮುಖ ಸದಸ್ಯ ಗುಲಾಂ ನಬಿ ಆಜಾದ್ 5 ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಿನ ನಂತರ ನಿರಂತರವಾಗಿ ಚರ್ಚೆಯಲ್ಲಿದ್ದಾರೆ. ಜಿ-23 ನಾಯಕ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು. ಇದಾದ ಬಳಿಕ ಸೋನಿಯಾ ಗಾಂಧಿ ಭೇಟಿಯಾಗುವುದು ದೊಡ್ಡ ಸುದ್ದಿಯಲ್ಲ. ಅವರನ್ನು ಸಾಮಾನ್ಯವಾಗಿ ಭೇಟಿಯಾಗುತ್ತಲೇ ಇರುತ್ತೇನೆ ಎಂದಿದ್ದರು.
ಪಕ್ಷದ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಚುನಾವಣೆ ಬಂದಾಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಯಾರಾಗಬೇಕು ಎಂಬುದನ್ನು ಪಕ್ಷದ ಕಾರ್ಯಕರ್ತರು ನಿರ್ಧರಿಸಲಿದ್ದಾರೆ ಎಂದು ಗುಲಾಂ ನಬಿ ಆಜಾದ್ ಹೇಳಿದ್ದರು. ಪಿರ್ ಪಂಜಾಲ್‌ನಲ್ಲಿ ವಾಸಿಸುವ ಎಲ್ಲಾ ಧರ್ಮದ ಜನರು, ಹಿಂದೂಗಳು, ಮುಸ್ಲಿಮರು, ಸಿಖ್ ಮತ್ತು ಕ್ರಿಶ್ಚಿಯನ್ನರ ಬಗ್ಗೆ ಮಾತನಾಡಿದ್ದರು. ಇದರೊಂದಿಗೆ ಧರ್ಮದ ಆಧಾರದ ಮೇಲೆ ವಿಭಜನೆ ಕುರಿತು ರಾಜಕೀಯ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.