ಮಹಿಳೆಯರೇ ನಿಮಗೊಂದು ಸಿಹಿ ಸುದ್ದಿ | ಯಾವುದೇ ಹಣ ಖರ್ಚು ಮಾಡದೇ ಪಡೆಯಿರಿ ಉಚಿತ ಹೊಲಿಗೆ ಯಂತ್ರ |

ಸ್ವಂತ ಉದ್ಯೋಗ ಮಾಡಿ ಸ್ವಾವಲಂಬಿಯಾಗಿ ಬದುಕಬೇಕೆನ್ನುವ ಆಸೆ ಎಲ್ಲಾ ಮಹಿಳೆಯರಿಗೆ ಇದೆ. ತಾವೂ ಆರ್ಥಿಕವಾಗಿ ಸದೃಢವಾಗಬೇಕೆಂಬ ಬಯಕೆ ಇರುತ್ತದೆ. ಬಹುತೇಕ ಮಹಿಳೆಯರು ಒಂದಲ್ಲ ಒಂದು ಸಮಯದಲ್ಲಿ ಹೊಲಿಗೆ ಕಲಿತಿರುತ್ತಾರೆ. ಏನೂ ಗೊತ್ತಿಲ್ಲದಿದ್ದರೂ ಹರಿದ ಬಟ್ಟೆಗೆ ಹೊಲಿಗೆ ಹಾಕುವಷ್ಟು ಕಲಿತಿದ್ದೇನೆ ಎನ್ನುವ ಮಹಿಳೆಯರು ತುಂಬಾ ಮಂದಿ ಇದ್ದಾರೆ.

ಹೊಲಿಗೆ ಎಂದೂ ಬೇಡಿಕೆ ಕಳೆದುಕೊಳ್ಳದ ಉದ್ಯೋಗ. ಎಲ್ಲ ಕಾಲದಲ್ಲೂ ಇದಕ್ಕೆ ಬೇಡಿಕೆಯಿದೆ. ಕೆಲ ಮಹಿಳೆಯರಿಗೆ ಸಂಪೂರ್ಣ ಹೊಲಿಗೆ ತಿಳಿದಿದ್ದರೂ ಮನೆಯಲ್ಲಿ ಮಶಿನ್ ಇರುವುದಿಲ್ಲ. ಅದಕ್ಕೆ ಹೂಡಿಕೆ ಮಾಡಿ ಉದ್ಯೋಗ ಶುರು ಮಾಡುವಷ್ಟು ಹಣವಿರುವುದಿಲ್ಲ. ನೀವೂ ಅಂಥವರಾಗಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ನೀವೂ ಕೂಡ ಹೊಲಿಗೆ ಮಶಿನ್ ಖರೀದಿ ಮಾಡಿ, ನಿಮ್ಮ ಸ್ವಂತ ಉದ್ಯೋಗ ಆರಂಭಿಸಬಹುದು. ಕೇಂದ್ರ ಸರ್ಕಾರ ಅದಕ್ಕೆ ನೆರವು ನೀಡುತ್ತದೆ.


Ad Widget

Ad Widget

Ad Widget

ಪಿಎಂ ಉಚಿತ ಹೊಲಿಗೆ ಯಂತ್ರ ಯೋಜನೆ 2022 ಅಡಿಯಲ್ಲಿ ಮಹಿಳೆಯರು ಹೊಲಿಗೆ ಮಶಿನ್ ಪಡೆಯಬಹುದು.

ಮಹಿಳೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ ಸಾಕು. ಪ್ರತಿ ರಾಜ್ಯದ 50,000 ಮಹಿಳೆಯರ ಅನುಕೂಲಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಪ್ರಧಾನಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಯು ದೇಶದ ಮಹಿಳೆಯರಿಗೆ ಆರ್ಥಿಕವಾಗಿ ಸ್ವತಂತ್ರರಾಗಲು ಅವಕಾಶ ನೀಡುತ್ತದೆ. ಇದು ಭಾರತದ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಉತ್ತಮ ಹೆಜ್ಜೆಯಾಗಿದೆ. ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ 2022 ರ ಅಡಿಯಲ್ಲಿ 20ರಿಂದ 40 ವರ್ಷ ವಯಸ್ಸಿನ ಮಹಿಳೆಯರು ಹೊಲಿಗೆ ಯಂತ್ರವನ್ನು ಪಡೆಯಲು ಅರ್ಹರು. ಇದಕ್ಕೆ ಮಹಿಳೆಯರು ಒಂದು ರೂಪಾಯಿ ಖರ್ಚು ಕೂಡ ಮಾಡಬೇಕಾಗಿಲ್ಲ.

ಉಚಿತ ಹೊಲಿಗೆ ಯಂತ್ರ ಪಡೆಯಲು ಅಗತ್ಯವಿರುವ ದಾಖಲೆ : ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ಮಹಿಳೆಯರೆಲ್ಲರೂ ಈ ಯೋಜನೆಯಡಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದು. ಈ ಯೋಜನೆಯ ಲಾಭ ಪಡೆಯಲು ಆಧಾರ್ ಕಾರ್ಡ್, ಜನ್ಮ ದಿನಾಂಕ ದಾಖಲೆ, ಆದಾಯ ಪ್ರಮಾಣಪತ್ರ, ಮೊಬೈಲ್ ಸಂಖ್ಯೆ, ಪಾಸ್‌ಪೋರ್ಟ್ ಗಾತ್ರದ ಫೋಟೋ, ಅಂಗವಿಕಲರಿಗೆ ವಿಶಿಷ್ಟ ಅಂಗವಿಕಲ ಐಡಿ ಮತ್ತು ವಿಧವೆಯರಿಗೆ ವಿಧವೆ ಪ್ರಮಾಣಪತ್ರದ ಅಗತ್ಯವಿದೆ.

ಅಧಿಕೃತ ವೆಬ್‌ಸೈಟ್ http://www.india.gov.in ಗೆ ಹೋಗಿ ಅರ್ಜಿ ಸಲ್ಲಿಸಬೇಕು. ವೆಬ್‌ಸೈಟ್‌ನ ಉಚಿತ ಹೊಲಿಗೆ ಪೂರೈಕೆಗಾಗಿ ಅರ್ಜಿ ನಮೂನೆಯ ಲಿಂಕ್ ಕ್ಲಿಕ್ ಮಾಡಿ. ಅರ್ಜಿ ನಮೂನೆಯ ಪಿಡಿಎಫ್ ನ ಪ್ರಿಂಟ್ ಔಟ್ ತೆಗೆದುಕೊಂಡು, ಅದರ ನಂತರ ನಿಮ್ಮ ವಿವರಗಳನ್ನು ಅದರಲ್ಲಿ ನಮೂದಿಸಿ. ಕೊನೆಯದಾಗಿ ನಿಮ್ಮ ದಾಖಲೆಗಳನ್ನು ಲಗತ್ತಿಸಿ. ಅರ್ಜಿ ಭರ್ತಿ ಮಾಡಿದ ನಂತ್ರ ಮತ್ತೊಮ್ಮೆ ಪರಿಶೀಲನೆ ನಡೆಸಿ ಅದನ್ನು ಸಲ್ಲಿಸಬೇಕಾಗುತ್ತದೆ. ನಿಮ್ಮ ಅರ್ಜಿಯನ್ನು ಕಚೇರಿ ಅಧಿಕಾರಿಗಳು ಪರಿಶೀಲಿಸುತ್ತಾರೆ. ಪರಿಶೀಲಿಸಿದ ನಂತರ ಹೊಲಿಗೆ ಯಂತ್ರ ನೀಡಲಾಗುತ್ತದೆ. ಅದಕ್ಕೆ ನೀವು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

Leave a Reply

error: Content is protected !!
Scroll to Top
%d bloggers like this: