ಆರ್ ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ | ಹೆಚ್ಚಿನ ಚಿಕಿತ್ಸೆಗೆ ದಿಲ್ಲಿಯ ಏಮ್ಸ್ ಗೆ ರವಾನಿಸಲು ನಿರ್ಧಾರ

ಮೇವು ಹಗರಣ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿರುವ ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಗಂಭೀರವಾಗಿದ್ದು, ಅವರನ್ನು ಹೊಸ ದಿಲ್ಲಿಯ ಏಮ್ಸ್‌ಗೆ ರವಾನಿಸಲು ನಿರ್ಧರಿಸಲಾಗಿದೆ. ರಾಂಚಿಯ ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲೂ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ದಿಲ್ಲಿ ಏಮ್ಸ್‌ಗೆ ವರ್ಗಾಯಿಸುವಂತೆ ರಿಮ್ಸ್‌ನ ತಜ್ಞ ವೈದ್ಯರು ಸೂಚಿಸಿರುವುದರಿಂದ, ಮಂಗಳವಾರವೇ ಲಾಲೂ ಪ್ರಸಾದ್ ಯಾದವ್ ಅವರನ್ನು ದಿಲ್ಲಿಗೆ ರವಾನೆ ಮಾಡಲು ನಿರ್ಧರಿಸಲಾಗಿದೆ.

ರಿಮ್ಸ್‌ನ 7 ತಜ್ಞ ವೈದ್ಯರ ತಂಡ ಲಾಲೂ ಪ್ರಸಾದ್ ಯಾದವ್ ಅವರನ್ನು ನೋಡಿಕೊಳ್ಳುತ್ತಿದ್ದರು.

ಲಾಲೂ ಪ್ರಸಾದ್ ಅವರು ಕಿಡ್ನಿ ಸಮಸ್ಯೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮೂತ್ರಪಿಂಡ ಕೇವಲ ಶೇ. 15 ರಿಂದ 20ರಷ್ಟು ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರನ್ನು ದಿಲ್ಲಿ ಏಮ್ಸ್‌ಗೆ ರವಾನಿಸಲು ಆದೇಶ ನೀಡಲಾಗಿದೆ ಎಂದು ಜಾರ್ಖಂಡ್‌ನ ಬಂಧೀಖಾನೆ ವಿಭಾಗದ ಐಜಿ ಮನೋಜ್ ಕುಮಾರ್ ಹೇಳಿದ್ದಾರೆ.

Leave A Reply