ಬ್ರಹ್ಮಾವರ: ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದ ಕಾರು ಅಪಘಾತ | ಒಂದೇ ಕುಟುಂಬದ ನಾಲ್ವರಿಗೆ ಗಾಯ, ಕಾರು ಸಂಪೂರ್ಣ ನಜ್ಜುಗುಜ್ಜು

ಬ್ರಹ್ಮಾವರ: ಒಂದೇ ಕುಟುಂಬದ ನಾಲ್ವರಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗುಪ್ರದೇಶಕ್ಕೆ ಉರುಳಿಬಿದ್ದ ಘಟನೆ ಉಳ್ಳೂರು ಕೆ.ಜಿ. ರೋಡ್ ಬಳಿ ನಡೆದಿದೆ.

ಕುಟುಂಬ ಸಮೇತರಾಗಿ ಕುಂದಾಪುರದ ದೇವಸ್ಥಾನಕ್ಕೆ ಭೇಟಿ ನೀಡಿ ಉಡುಪಿಗೆ ವಾಪಾಸಾಗುದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆದ್ದಾರಿಯಿಂದ ಉರುಳಿ ಬಿದ್ದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ .ಬ್ರಹ್ಮಾವರ ಪೋಲಿಸ್ ಠಾಣಾ
ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave A Reply

Your email address will not be published.